ರಾಮಕುಂಜೇಶ್ವರ ಕಾಲೇಜಿನಲ್ಲಿ ಪಾಲಕರ ಸಭೆ

New Project (43)
Published on

ಕಡಬ: ಶ್ರೀರಾಮಕುಂಜೇಶ್ವರ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಾರಂಭೋತ್ಸವ, ಪಾಲಕರ ಸಭೆ ನಡೆಯಿತು. 10ನೇ ತರಗತಿಯಲ್ಲಿ ಅತ್ಯುನ್ನತ ಅಂಕ ಪಡೆದು ಪ್ರಥಮ ಪಿಯುಸಿಗೆ ದಾಖಲಾದ ವಿದ್ಯಾರ್ಥಿನಿಯರಾದ ಚೈತ್ರಾ, ಶ್ರೇಯಾ ವಿ.ಎಸ್., ಗ್ರೀಷ್ಮ, ಆಯಿಷಾ ಶಿಜಾ, ಶ್ರೇಯಾ ಶೆಟ್ಟಿ ಉದ್ಘಾಟನೆ ನೆರವೇರಿಸಿದರು. ಸಂಸ್ಥೆ ಕಾರ್ಯದರ್ಶಿ ರಾಧಾಕೃಷ್ಣ ಕೆ.ಎಸ್. ಅಧ್ಯಕ್ಷತೆ ವಹಿಸಿದ್ದರು. ಉಪನ್ಯಾಸಕ ಸುಬ್ರಹ್ಮಣ್ಯ ಕಾರಂತ್ ಸಂಸ್ಥೆಯಲ್ಲಿರುವ ಸೌಲಭ್ಯದ ಕುರಿತು ಮಾಹಿತಿ ನೀಡಿದರು. ಪ್ರಾಂಶುಪಾಲ ಚಂದ್ರಶೇಖರ್ ಕೆ. ಸಂಸ್ಥೆಯ ನಿಯಮ ತಿಳಿಸಿದರು. ಆಡಳಿತ ಮಂಡಳಿ ಸದಸ್ಯ ಲಕ್ಷ್ಮೀನಾರಾಯಣರಾವ್ ಆತೂರು ಮಾತನಾಡಿದರು. ವಿವಿಧ ವಿಷಯಗಳ ಉಪನ್ಯಾಸಕರು ಉಪಸ್ಥಿತರಿದ್ದರು. ಉಪನ್ಯಾಸಕರಾದ ವಸಂತಕುಮಾರ್ ಡಿ. ಸ್ವಾಗತಿಸಿದರು. ತನುಜಾ ವಂದಿಸಿದರು. ಚೇತನ್ ಎಂ. ಕಾರ್ಯಕ್ರಮ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net