ಎಸ್ ಡಿ ಎಂ ಕಾಲೇಜಿನಲ್ಲಿ ಪಾಲಕರ ಸಭೆ

udp-1-sdm
Published on

ಉಡುಪಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಮಹಾವಿದ್ಯಾಲಯ ಮತ್ತು ಆಸ್ಪತ್ರೆ, ಕುತ್ಪಾಡಿ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜಲ್ಲಿ ಶನಿವಾರ ಒಂದನೇ ಮತ್ತು ಮೂರನೇ ಬಿಎಎಂಎಸ್​ ವಿದ್ಯಾರ್ಥಿಗಳ ಪಾಲಕರು ಮತ್ತು ಶಿಕ್ಷಕರ ಸಭೆ ಏರ್ಪಡಿಸಲಾಗಿತ್ತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಆಯುರ್ವೇದ ಕಾಲೇಜಿನ ಪ್ರಾಂಶುಪಾಲೆ ಡಾ. ಮಮತಾ ಕೆ.ವಿ. ಮಾತನಾಡಿ, ವಿದ್ಯಾರ್ಥಿಗಳ ಪಠ್ಯಕ್ರಮ, ಪಠ್ಯೇತರ ಚಟುವಟಿಕೆಗಳ ಕಾರ್ಯಕ್ಷಮತೆಯ ಬಗ್ಗೆ ತಿಳಿಹೇಳಿದರು. ವೈದ್ಯಕಿಯ ವಿದ್ಯಾರ್ಥಿಗಳ ಶೈಕ್ಷಣಿಕ ಉತಷ್ಟತೆಯ ಜತೆಗೆ ವ್ಯಕ್ತಿತ್ವ ವಿಕಸನದ ಅಗತ್ಯತೆಯ ಬಗ್ಗೆಯೂ ಮಾಹಿತಿ ನೀಡಿದರು.

ಆಡಳಿತ ಮುಖ್ಯಾಧಿಕಾರಿ ಡಾ. ವೀರಕುಮಾರ ಕೆ., ಕಾಲೇಜಿನ ಶೈಕ್ಷಣಿಕ ವಿಭಾಗದ ಮುಖ್ಯಸ್ಥೆ ಡಾ. ಶ್ರೀಲತಾ ಕಾಮತ್​ ಹಾಗೂ ಸ್ನಾತಕ ವಿಭಾಗದ ಡೀನ್​ ಡಾ. ರಜನೀಶ್​ ವಿ. ಗಿರಿ ಉಪಸ್ಥಿತರಿದ್ದರು. ಎಲ್ಲ ವಿಭಾಗದ ಪ್ರಾಧ್ಯಾಪಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. 150ಕ್ಕೂ ಅಧಿಕ ಪಾಲಕರು ಆಗಮಿಸಿದ್ದರು. ಸಹಾಯಕ ಪ್ರಾಧ್ಯಾಪಕಿ ಡಾ. ಶುಭಾ ಪಿ.ಯು. ಕಾರ್ಯಕ್ರಮ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net