ಪೊಳಲಿ ಸರ್ಕಾರಿ ಶಾಲೆಯಲ್ಲಿ ಪಾಲಕರ ಸಭೆ

polali
ಪೊಳಲಿ ದೇವಸ್ಥಾನದ ಪಕ್ಕದಲ್ಲಿರುವ ಸರ್ವಮಂಗಳ ಸಭಾಗೃಹದಲ್ಲಿ 2023-24ನೇ ಸಾಲಿನ ಎಸ್ಸೆಸ್ಸೆಲ್ಸಿಯಲ್ಲಿ ಅತ್ಯಧಿಕ ಅಂಕ ಪಡೆದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.
Published on

ಗುರುಪುರ: ಪೊಳಲಿ ದೇವಸ್ಥಾನದ ಪಕ್ಕದಲ್ಲಿರುವ ಸರ್ವಮಂಗಳ ಸಭಾಗೃಹದಲ್ಲಿ ಪೊಳಲಿ ಸರ್ಕಾರಿ ಪ್ರೌಢಶಾಲೆಯ 2024-25ನೇ ಸಾಲಿನ ಪಾಲಕರ ಪ್ರಥಮ ಸಭೆ ಶನಿವಾರ ನಡೆಯಿತು.

ರಾಮಕೃಷ್ಣ ತಪೋವನದ ವಿವೇಕ ಚೈತನ್ಯಾನಂದ ಸ್ವಾಮಿ ಅವರು ಮಕ್ಕಳಿಗೆ ಆಶೀರ್ವಚನ ನೀಡಿದರು. ಪಾಲಕರಾದ ಅರುಣೋದಯ ಮತ್ತು ರಶ್ಮಿ ಅವರು ಶಾಲೆಯ ಬಗ್ಗೆ ಅನಿಸಿಕೆ ವ್ಯಕ್ತಪಡಿಸಿದರು. 2023-24ನೇ ಸಾಲಿನ ಎಸ್ಸೆಸ್ಸೆಲ್ಸಿಯಲ್ಲಿ ಅತ್ಯಧಿಕ ಅಂಕ ಪಡೆದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.

ವೆಂಕಟೇಶ ನಾವಡ ಅಧ್ಯಕ್ಷತೆ ವಹಿಸಿದ್ದರು. ಕರಿಯಂಗಳ ಗ್ರಾ.ಪಂ. ಅಧ್ಯಕ್ಷೆ ರಾಧಾ ಎಲ್, ಪಿಡಿಒ, ತಾ.ಪಂ. ಮಾಜಿ ಸದಸ್ಯ ಯಶವಂತ ಕೋಟ್ಯಾನ್, ಪಂಚಾಯಿತಿ ಸದಸ್ಯರಾದ ಲೋಕೇಶ್ ಭರಣಿ, ಮುರಳೀದರ ಆಚಾರ್ಯ ಉಪಸ್ಥಿತರಿದ್ದರು. ಸುಬ್ರಾಯ ಪೈ ಸ್ವಾಗತಿಸಿದರು. ಶಿಕ್ಷಕಿ ಪೂರ್ಣಿಮಾ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net