ಪಾಲಕರ ಸಭೆ, ಮಾಹಿತಿ ಕಾರ್ಯಕ್ರಮ

gan-5
Published on

ಕುಂದಾಪುರ: ತಲ್ಲೂರು ಫ್ಯಾಮಿಲಿ ಟ್ರಸ್ಟ್ ಪ್ರಾಯೋಜಕತ್ವದ ತಲ್ಲೂರಿನ ನಾರಾಯಣ ವಿಶೇಷ ಮಕ್ಕಳ ಶಾಲೆಯಲ್ಲಿ 2024-25ನೇ ಶೈಕ್ಷಣಿಕ ವರ್ಷದ ಒಂಬತ್ತನೇ ಪಾಲಕರ ಸಭೆ ಮತ್ತು ಮಾಹಿತಿ ಕಾರ್ಯಕ್ರಮ ಮಣಿಪಾಲ ಪ್ರಸನ್ನ ಸ್ಕೂಲ್ ಆಫ್ ಪಬ್ಲಿಕ್ ಹೆಲ್ತ್ ಸಮಾಜ ಕಾರ್ಯ ವಿಭಾಗದ ಸಹಯೋಗದಲ್ಲಿ ಶುಕ್ರವಾರ ನಡೆಯಿತು.

ಆಟಿಸಂ ಸೊಸೈಟಿ ಉಡುಪಿ ಪ್ರೋಗ್ರಾಮ್ ಮ್ಯಾನೇಜರ್ ಕೀರ್ತೆಶ್, ವಿಕಲಚೇತನ ಮಕ್ಕಳ ಪಾಲಕರಲ್ಲಿರುವ ಬಲ ಹಾಗೂ ದೌರ್ಬಲ್ಯದ ಕುರಿತು ಹಾಗೂ ವಿಶೇಷ ಮಕ್ಕಳ ಆರೈಕೆಯಲ್ಲಿ ಪಾಲಕರು ಎದುರಿಸುತ್ತಿರುವ ವಿವಿಧ ಸಮಸ್ಯೆ ಹಾಗೂ ಅವುಗಳ ಪರಿಹಾರಕ್ಕೆ ಅನುಸರಿಸಬೇಕಾದ ಕ್ರಮಗಳ ಕುರಿತು ಮಾಹಿತಿ ನೀಡಿದರು. ರೋಹನ್ ಶುಭಹಾರೈಸಿದರು. ತಲ್ಲೂರು ಫ್ಯಾಮಿಲಿ ಟ್ರಸ್ಟ್ ಮ್ಯಾನೇಜಿಂಗ್ ಟ್ರಸ್ಟಿ ಸುರೇಶ್, ಪೋಷಕರಾದ ರಘುನಂದನ್ ನಾಯಕ್, ಎಸ್‌ಡಿಎಂಸಿ ಅಧ್ಯಕ್ಷ ವಿನಯ್ ಕುಮಾರ್ ಉಪಸ್ಥಿತರಿದ್ದರು. ಸಹಶಿಕ್ಷಕಿ ಶ್ರುತಿ ಸ್ವಾಗತಿಸಿದರು. ಎಂ.ಎಸ್.ಡಬ್ಲುೃ ವಿದ್ಯಾರ್ಥಿ ಜಿತೇಶ್ ವಂದಿಸಿ, ಗ್ರಿಗ್ನ ಕಾರ್ಯಕ್ರಮ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net