ಪಾಲಕರು ಹೆಚ್ಚಿನ ಗಮನ ಹರಿಸಿ

19ss1makkalinda udgatane
ಸುಪ್ರಜ ಗುರುಕುಲ ಶಾಲೆಯಲ್ಲಿ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಮತ್ತು ಮಕ್ಕಳ ದಿನಾಚರಣೆ ಕಾರ್ಯಕ್ರಮವನ್ನು ಶಾಲೆಯ ಪುಟಾಣಿಗಳು ಉದ್ಘಾಟಿಸಿದರು.
Published on

ಶನಿವಾರಸಂತೆ: ಬದಲಾಗುತ್ತಿರುವ ಕಾಲಘಟ್ಟದಲ್ಲಿ ಮಕ್ಕಳ ಮನಸ್ಥಿತಿಯನ್ನು ಅರಿತುಕೊಂಡು ಪಾಲಕರು ಹೆಚ್ಚಿನ ಕಾಳಜಿ ವಹಿಸಬೇಕು ಎಂದು ಸುಪ್ರಜ ಗುರುಕುಲ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯಶಿಕ್ಷಕಿ ಸುಜಲಾದೇವಿ ಹೇಳಿದರು.

ಶಾಲೆಯಲ್ಲಿ ಆಯೋಜಿಸಲಾಗಿದ್ದ ಕನ್ನಡ ರಾಜ್ಯೋತ್ಸವ ಮತ್ತು ಮಕ್ಕಳ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ವಿದ್ಯಾಸಂಸ್ಥೆಯು ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣದ ಜತೆಯಲ್ಲಿ ವಾಹನ ವ್ಯವಸ್ಥೆ, ಮೂಲಸೌಕರ್ಯಗಳನ್ನು ಕಲ್ಪಿಸಿದೆ. ಸಂಸ್ಥೆಯ ಬೆಳವಣಿಗೆಗೆ ಪಾಲಕರ ಪಾತ್ರ ದೊಡ್ಡದಿದೆ ಎಂದು ಹೇಳಿದರು.

ಕಾರ್ಯಕ್ರಮವನ್ನು ಶಾಲೆಯ ವಿದ್ಯಾರ್ಥಿಗಳು ಉದ್ಘಾಟಿಸಿದರು. ಹಿರಿಯ ಶಿಕ್ಷಕಿ ಎಚ್.ಕೆ.ಕೆಂಚಮ್ಮ ಹಾಗೂ ಯೋಗೇಶ್ ಮಾತನಾಡಿದರು. ವಿದ್ಯಾರ್ಥಿಗಳಿಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ರಸಪ್ರಶ್ನೆ ಸ್ಪರ್ಧೆ ಏರ್ಪಡಿಸಲಾಗಿತ್ತು. ಜಾನಪದ ಪರಿಷತ್ ಹೋಬಳಿ ಘಟಕದ ನಿರ್ದೇಶಕ ಪ್ರಕಾಶ್‌ಚಂದ್ರ, ಶಿಕ್ಷಕಿ ಆಶಾ ಇದ್ದರು.

ಸುಪ್ರಜ ಗುರುಕುಲ ಶಾಲೆಯಲ್ಲಿ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಮತ್ತು ಮಕ್ಕಳ ದಿನಾಚರಣೆ ಕಾರ್ಯಕ್ರಮವನ್ನು ಶಾಲೆಯ ಪುಟಾಣಿಗಳು ಉದ್ಘಾಟಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net