ಪಾಲಕರು ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡಲಿ

school
Published on

ನರಗುಂದ: ತಾಲೂಕಿನ ಕೊಣ್ಣೂರಿನ ಕೆಇಎಸ್ ಶಿಕ್ಷಣ ಸಂಸ್ಥೆ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮಕ್ಕೆ ಸಂಸ್ಥೆ ಅಧ್ಯಕ್ಷ ಶಿವಲಿಂಗಪ್ಪ ಯಲಿಗಾರ ವಿದ್ಯಾರ್ಥಿಗಳಿಗೆ ಉಚಿತ ಪಠ್ಯ-ಪುಸ್ತಕ ವಿತರಿಸುವುದರ ಮೂಲಕ ಇತ್ತೀಚೆಗೆ ಚಾಲನೆ ನೀಡಿದರು.

ಶಿಕ್ಷಕರು ವಿದ್ಯಾರ್ಥಿಗಳಿಗೆ ಸಂಸ್ಕಾರಯುತ ಮೌಲ್ಯಾಧಾರಿತ ಗುಣಮಟ್ಟದ ಶಿಕ್ಷಣ ನೀಡಬೇಕು. ನಾಡಿನ ದೇಶ ಭಕ್ತರ ಬಗ್ಗೆ ವಿಶೇಷ ಅರಿವು ಮೂಡಿಸಿ ಅವರಲ್ಲಿ ದೇಶಾಭಿಮಾನದ ಭಕ್ತಿ ಬೆಳೆಯುವಂತೆ ಮಾಡಬೇಕು. ಪಾಲಕರು ಮಕ್ಕಳಿಗಾಗಿ ಆಸ್ತಿ ಮಾಡದೆ ಅವರನ್ನು ಸುಸಂಸ್ಕೃತ ವಿದ್ಯಾವಂತರನ್ನಾಗಿಸಬೇಕಿದೆ ಎಂದು ಶಿವಲಿಂಗಪ್ಪ ತಿಳಿಸಿದರು.

ಮುಖ್ಯೋಪಾಧ್ಯಾಯ ಮಹೇಶ ಹಂಗನಕಟ್ಟಿ, ಗಣೇಶಗೌಡ ಪಾಟೀಲ, ಮಾರುತಿ ಭಾಗಲೆ, ವಿಜಯಲಕ್ಷ್ಮೀ ಕಿತ್ತೂರ, ಬಸನಗೌಡ ಪಾಟೀಲ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net