ಸರ್ಕಾರಿ ಶಾಲೆಗಳ ಬಲವರ್ಧನೆಗೆ ಪಾಲಕರು ಕೈ ಜೋಡಿಸಲಿ

LXR BHUMI POOJE
Published on

ಲಕ್ಷೆ್ಮೕಶ್ವರ: ಪಾಲಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸುವ ಮೂಲಕ ಸರ್ಕಾರಿ ಶಾಲೆಗಳ ಬಲವರ್ಧನೆಗೆ ಕೈ ಜೋಡಿಸಬೇಕು ಎಂದು ಶಾಸಕ ಡಾ.ಚಂದ್ರು ಲಮಾಣಿ ಹೇಳಿದರು.

ತಾಲೂಕಿನ ಯಲ್ಲಾಪುರ ಗ್ರಾಮದ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ವಿವೇಕ ಕೊಠಡಿ ಯೋಜನೆ ಅಡಿ 34.30 ಲಕ್ಷ ರೂ.ಗಳಲ್ಲಿ 2 ಕೊಠಡಿ ನಿರ್ಮಾಣ ಕಾಮಗಾರಿಗೆ ಗುರುವಾರ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.

ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಹೆಚ್ಚಳವಾಗಬೇಕು. ಶಿಕ್ಷಣದ ಗುಣಮಟ್ಟದ ಎತ್ತರಕ್ಕೇರಬೇಕಾದಲ್ಲಿ ಮೊದಲ ಆದ್ಯತೆಯಾಗಿ ಹೆಚ್ಚಿನ ಅನುದಾನ, ಸೌಲಭ್ಯಗಳನ್ನು ಕಲ್ಪಿಸುವುದು ಮುಖ್ಯವಾಗಿದೆ. ಅದಕ್ಕೆ ತಕ್ಕಂತೆ ಶಿಕ್ಷಕರು ಸಮರ್ಪಣಾ ಮನೋಭಾವದಿಂದ ಸೇವೆ ಸಲ್ಲಿಸಬೇಕು. ಪಾಲಕರೂ ಸಹ ಆಂಗ್ಲ ಭಾಷೆಯ ವ್ಯಾಮೋಹ ಬಿಟ್ಟು ಗ್ರಾಮೀಣ ಭಾಗದ ಕನ್ನಡ ಶಾಲೆಗಳನ್ನು ಉಳಿಸುವ ಕಾರ್ಯ ಮಾಡಬೇಕು. ಮಕ್ಕಳಿಗೆ ಬಾಲ್ಯದಲ್ಲಿಯೇ ಶಿಕ್ಷಣದ ಜತೆಗೆ ಸಂಸ್ಕಾರ, ಮೌಲ್ಯಗಳನ್ನು ಕಲಿಸಬೇಕು ಎಂದರು.

ಕ್ಷೇತ್ರದಲ್ಲಿನ ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ಅಗತ್ಯ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದರು.

ದೊಡ್ಡೂರ ಗ್ರಾಪಂ ಅಧ್ಯಕ್ಷ ಚಂದ್ರಶೇಖರ ಈಳಿಗೇರ, ಶಾಲಾ ಸುಧಾರಣಾ ಸಮಿತಿ ಅಧ್ಯಕ್ಷ ಮಂಜಣ್ಣ ಅಂಗಡಿ, ಕ್ಷೇತ್ರ ಶಿಕ್ಷಣಾಧಿಕಾರಿ ಎಚ್. ನಾಣಕಿ ನಾಯಕ, ಮಹಾಂತಗೌಡ ಭರಮಗೌಡ್ರ, ತುಕ್ಕಪ್ಪ ಪೂಜಾರ, ಸಕ್ರಪ್ಪ ಕಡೆಮನಿ, ಫಕೀರಗೌಡ ಭರಮಗೌಡ್ರ, ಮಹಾಂತೇಶ ಹರಕುಣಿ, ಹನುಮಂತಪ್ಪ ಲಮಾಣಿ, ರಾಮಣ್ಣ ಲಮಾಣಿ, ಕಿರಣ ಲಮಾಣಿ, ಕುಮಾರ ಲಮಾಣಿ, ಮಹಾಂತೇಶ ಮತ್ತೂರು, ಶಿವಪ್ಪ ಅಕ್ಕೂರ, ಸುನೀಲ ಲಮಾಣಿ, ಡಾಕಪ್ಪ ಲಮಾಣಿ, ರವಿ ಭಜಕ್ಕನವರ, ಎಫ್.ಎಚ್. ತಿಮ್ಮಾಪುರ, ಮಹೇಶ ಅಥಣಿ, ಯು.ಜಿ. ಹುಚ್ಚಯ್ಯನಮಠ, ಫಕೀರೇಶ ಕಟಗಿ, ಮುಖ್ಯೋಪಾಧ್ಯಾಯ ಬಿ.ಎನ್. ಗಾಯಕವಾಡ, ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net