ಮಕ್ಕಳ ಮೇಲಿರಲಿ ಪಾಲಕರ ನಿಗಾ

blm
Published on

ವಿಜಯವಾಣಿ ಸುದ್ದಿಜಾಲ ಶಿರ್ವ ಮಕ್ಕಳಿಗೆ ನೈತಿಕ ಶಿಕ್ಷಣದ ಅಗತ್ಯವಿದ್ದು, ಪಾಲಕರು ತಮ್ಮ ಮಕ್ಕಳ ಮೇಲೆ ನಿಗಾ ಇಡಬೇಕು. 18 ವರ್ಷದೊಳಗಿನ ಮಕ್ಕಳೇ ಹೆಚ್ಚಿನ ಸಂಖ್ಯೆಯಲ್ಲಿ ಮಾದಕ ದ್ರವ್ಯ ಸೇವನೆ ಸಹಿತ ಅಪರಾಧ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುತ್ತಿದ್ದಾರೆ ಎಂದು ಶಿರ್ವ ಪೊಲೀಸ್ ಠಾಣಾಧಿಕಾರಿ ಮಂಜುನಾಥ್ ಮರಬದ ಹೇಳಿದರು. ಬಂಟಕಲ್ಲು ಶ್ರೀ ದುರ್ಗಾಪರಮೇಶ್ವರಿ ದೇವಳದ ವಠಾರದಲ್ಲಿ ನಾಗರಿಕ ಸೇವಾ ಸಮಿತಿ ಆಶ್ರಯದಲ್ಲಿ ಶಿರ್ವ ಪೊಲೀಸ್ ಠಾಣೆ ಸಹಯೋಗದೊಂದಿಗೆ ಆಯೋಜಿಸಿದ್ದ ಪೊಲೀಸ್ ಜನಸಂಪರ್ಕ ಸಭೆ ಮತ್ತು ಪೊಲೀಸ್ ಇಲಾಖಾ ಮಾಹಿತಿ ಕಾರ್ಯಕ್ರಮದಲ್ಲಿ ಮಾತನಾಡಿದರು. ಶ್ರೀ ಕ್ಷೇತ್ರ ಬಂಟಕಲ್ಲು ದುರ್ಗಾಪರಮೆಶ್ವರಿ ದೇವಳದ ಆಡಳಿತ ಮೊಕ್ತೇಸರ ಗಂಪದಬೈಲು ಜಯರಾಮ ಪ್ರಭು ಉದ್ಘಾಟಿಸಿದರು. ಎಎಸ್‌ಐ ಶ್ರೀಧರ್ ಮತ್ತು ಮಹಿಳಾ ಪೊಲೀಸ್ ಗೀತಾ, ಮಹಿಳೆ ಹಾಗೂ ಅಪ್ರಾಪ್ತರ ಮೇಲಿನ ಲೈಂಗಿನ ದೌರ್ಜನ್ಯ, ಪೋಕ್ಸೋ ಕಾನೂನು, ಅಪ್ರಾಪ್ತರ ವಾಹನ ಚಾಲನೆ ವಿರುದ್ಧ ಕ್ರಮ ಹಾಗೂ ಪೊಲೀಸ್ ಸಹಾಯವಾಣಿ ಕುರಿತು ಮಾಹಿತಿ ನೀಡಿದರು. ರಿಕ್ಷಾ ಯೂನಿಯನ್ ಅಧ್ಯಕ್ಷ ಮಂಜುನಾಥ್ ಪೂಜಾರಿ, ಕಾರು ಚಾಲಕ ಮಾಲಕರ ಸಂಘದ ಅಧ್ಯಕ್ಷ ಉಮೇಶ್ ರಾವ್, ಗ್ರಾಮ ಪಂಚಾಯಿತಿ ಸದಸ್ಯ ಸತೀಶ್, ಬಂಟಕಲ್ಲು ದೇವಳದ ಆಡಳಿತ ಮಂಡಳಿ ಅಧ್ಯಕ್ಷ ಉಮೇಶ ಪ್ರಭು ಪಾಲಮೆ, ರಾಮಕೃಷ್ಣ ಶರ್ಮ, ಸುನೀತಾ ದೇವೇಂದ್ರ ನಾಯಕ್, ಹೆಡ್‌ಕಾನ್‌ಸ್ಟೆಬಲ್ ಮಂಜುನಾಥ ಅಡಿಗ, ಬಂಟಕಲ್ಲು ಬೀಟ್ ಪೊಲೀಸ್ ಶಿವಾನಂದ, ಮಂಜುನಾಥ್ ಹಾಗೂ ನಾಗರಿಕರು ಉಪಸ್ಥಿತರಿದ್ದರು. ಕೆ.ಆರ್.ಪಾಟ್ಕರ್ ಸ್ವಾಗತಿಸಿದರು. ದಿನೇಶ ದೇವಾಡಿಗ ಕಾರ್ಯಕ್ರಮ ನಿರೂಪಿಸಿದರು. ರಾಜಾಪುರ ಸಾರಸ್ವತ ಸೇವಾ ವೃಂದ, ಆಟೋ ರಿಕ್ಷಾ ಚಾಲಕರ ಮಾಲಕರ ಸಂಘ, ಕಾರು ಚಾಲಕರ ಮತ್ತು ಮಾಲಕರ ಸಂಘದ ಪ್ರಮುಖರು ಇದ್ದರು.

ಬುದ್ಧಿವಂತರ ಜಿಲ್ಲೆಯೆಂದೇ ಪ್ರಸಿದ್ಧಿಯಾದ ಮಂಗಳೂರು, ಉಡುಪಿ ಭಾಗದಲ್ಲಿ ಮೊಬೈಲ್ ಮೂಲಕ ವಂಚನೆಗೆ ಒಳಗಾಗುವವರ ಸಂಖ್ಯೆ ಹೆಚ್ಚುತ್ತಿವೆ. ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡುವಾಗ ಎಚ್ಚರಿಕೆ ವಹಿಸಬೇಕಿದ್ದು, ಪ್ರಚೋದನಕಾರಿ ಸಂದೇಶ ಹರಡುವುದು, ಲೈಕ್ ಕೊಡುವುದು ಅಪರಾಧ. ಮಂಜುನಾಥ್ ಮರಬದ, ಶಿರ್ವ ಪೊಲೀಸ್ ಠಾಣಾಧಿಕಾರಿ https://www.vijayavani.net/rising-river-levels-turbulent-seas https://www.vijayavani.net/world-blood-donor-day-sdm-udupi

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net