ಪರೇಶ ಮೇಸ್ತ ಕೊಲೆ ಆರೋಪಿಗೇ ವಕ್ಫ್​ ಬೋರ್ಡ್​ ಉಪಾಧ್ಯಕ್ಷ ಸ್ಥಾನ!; ಬಿಜೆಪಿ ವಿರುದ್ಧ ತೀವ್ರ ಅಸಮಾಧಾನ..

Paresh Mesta
ಪರೇಶ ಮೇಸ್ತ, ಅಜಾದ್ ಅಣ್ಣಿಗೇರಿ
Published on

ಉತ್ತರಕನ್ನಡ: ಹಿಂದೂ ಕಾರ್ಯಕರ್ತ ಪರೇಶ ಮೇಸ್ತಾ ಕೊಲೆ ಪ್ರಕರಣ ಪ್ರಮುಖ ಆರೋಪಿಗೇ ವಕ್ಫ್​ ಬೋರ್ಡ್​ ಉಪಾಧ್ಯಕ್ಷ ಸ್ಥಾನ ನೀಡಿರುವುದಕ್ಕೆ ಬಿಜೆಪಿ ವಿರುದ್ಧ ಕೆಲವು ಕಾರ್ಯಕರ್ತರೇ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಉತ್ತರಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಪರೇಶ ಮೇಸ್ತ ಕೊಲೆ ಪ್ರಕರಣದ ಪ್ರಮುಖ ಆರೋಪಿ ಆಗಿರುವ ಅಜಾದ್ ಅಣ್ಣಿಗೇರಿ ಎಂಬಾತನಿಗೆ ವಕ್ಫ್ ಬೋರ್ಡ್ ಜಿಲ್ಲಾ ಉಪಾಧ್ಯಕ್ಷ ಸ್ಥಾನ ನೀಡಲಾಗಿದೆ. ಬಿಜೆಪಿ ಸರ್ಕಾರದ ಅವಧಿಯಲ್ಲಿಯೇ ಆರೋಪಿಗೆ ವಕ್ಫ್​ ಬೋರ್ಡ್ ಉಪಾಧ್ಯಕ್ಷ ಸ್ಥಾನ ನೀಡಲಾಗಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಬಿಜೆಪಿ ವಿರುದ್ಧ ಟೀಕೆ ವ್ಯಕ್ತವಾಗಿದೆ. ಮಾತ್ರವಲ್ಲ, ಇದು ಬಿಜೆಪಿಗರ ಅಸಮಾಧಾನಕ್ಕೆ ಕಾರಣವಾಗಿರುವುದರಿಂದ ವಕ್ಫ್ ಬೋರ್ಡ್ ಪದಾಧಿಕಾರಿಗಳನ್ನ ಬದಲಿಸುವಂತೆ ಸಚಿವರಿಗೆ ಜಿಲ್ಲಾ ವಕ್ಫ್​ ಸಲಹಾ ಸಮಿತಿ ಅಧ್ಯಕ್ಷ ಅನೀಷ್ ತಹಸೀಲ್ದಾರ್ ಪತ್ರ ಬರೆದಿದ್ದಾರೆ.

ಹೊನ್ನಾವರದಲ್ಲಿ 2017ರ ಡಿಸೆಂಬರ್ 6ರಂದು ಪರೇಶ ಮೇಸ್ತ ಕೊಲೆ ಆಗಿತ್ತು. ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಈ ಕೊಲೆ ನಡೆದಿದ್ದು, ಆಗ ಬಿಜೆಪಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸಿತ್ತು. ಬಳಿಕ ಕಾಂಗ್ರೆಸ್ ಸರ್ಕಾರ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net