ಪರಿಸರ ಗಣಪತಿ ಜಾಗೃತಿ ಕಾರ್ಯಕ್ರಮ

parisara
Published on

ಕುಶಾಲನಗರ:

ಕುಶಾಲನಗರದ ಫಾತಿಮ ಪ್ರೌಢಶಾಲೆಯಲ್ಲಿ ಮಂಗಳವಾರ ಪರಿಸರ ಸ್ನೇಹಿ ಗಣೇಶೋತ್ಸವ ಜಾಗೃತಿ ಆಂದೋಲನ 2025 ನಡೆಸಲಾಯಿತು. ಪರಿಸರ ಸ್ನೇಹಿ ಗಣೇಶೋತ್ಸವ ಆಚರಣೆಯ ಮಹತ್ವದ ಕುರಿತು ಮಾಹಿತಿ ನೀಡಿದ ಪರಿಸರ ಜಾಗೃತಿ ಆಂದೋಲನದ ಜಿಲ್ಲಾ ಸಂಚಾಲಕ ಟಿ.ಜಿ. ಪ್ರೇಮಕುಮಾರ್, ವಿದ್ಯಾರ್ಥಿಗಳಿಗೆ ಪರಿಸರ ಪ್ರತಿಜ್ಞಾ ವಿಧಿ ಬೋಧಿಸಿ ಪರಿಸರ ಸ್ನೇಹಿ ಗಣೇಶೋತ್ಸವವನ್ನು ಆಚರಿಸುವಂತೆ ಮಾಹಿತಿ ನೀಡಿದರು.

ಪರಿಸರ ಸ್ನೇಹಿ ಮಣ್ಣಿನ ಗಣೇಶ ಮೂರ್ತಿ ಸ್ಥಾಪನೆ ಮಾಡುವಂತೆ ಮತ್ತು ರಾಸಾಯನಿಕ ಬಣ್ಣದ ಹಾಗೂ ಪಿ.ಓ.ಪಿ.ಗಣೇಶ ಮೂರ್ತಿಯನ್ನು ತ್ಯಜಿಸುವ ಕುರಿತು ಜನಜಾಗೃತಿ ಮೂಡಿಸಬೇಕು. ಜೇಡಿ ಮಣ್ಣಿನಿಂದ ತಯಾರಿಸಿದ ಪರಿಸರ ಸ್ನೇಹಿ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸುವ ಮೂಲಕ ಮಾಲಿನ್ಯ ತಡೆಗಟ್ಟಿ ಪರಿಸರ ಸಂರಕ್ಷಣೆಗೆ ಒತ್ತು ನೀಡಬೇಕು ಎಂದರು.

ಫಾತಿಮ ಪ್ರೌಢಶಾಲಾ ಮುಖ್ಯ ಶಿಕ್ಷಕ ಕೆ.ಎ. ಜಾನ್ಸನ್ ಮಾತನಾಡಿ, ವಿದ್ಯಾರ್ಥಿಗಳು ಜನರಲ್ಲಿ ಪರಿಸರ ಜಾಗೃತಿ ಮೂಡಿಸಬೇಕು ಎಂದು ಹೇಳಿದರು.

ಶಾಲೆಯ ಶಿಕ್ಷಕಿ ಅನಿತಾ ಸುಪ್ರಿಯ ಪ್ರಾಸ್ತಾವಿಕವಾಗಿ ಮಾತನಾಡಿದರು. ಮಾಲಿನ್ಯ ನಿಯಂತ್ರಣ ಮಂಡಳಿಯ ಯೋಜನಾ ಸಹಾಯಕ ಆಸ್ಟಿನ್, ಗೈಡ್ಸ್ ಶಿಕ್ಷಕಿ ಬಿ.ಎಂ. ಶಿಫಾನತ್, ಶಾಲಾ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಇದ್ದರು.

ಇದೇ ವೇಳೆ ಪರಿಸರ ಸ್ನೇಹಿ ಗಣೇಶೋತ್ಸವ ಆಚರಣೆಗೆ ಸಂಬAಧಿಸಿದAತೆ ವಿದ್ಯಾರ್ಥಿಗಳು ಪರಿಸರ ಘೋಷಣೆಗಳನ್ನು ಪ್ರಚುರಪಡಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net