ಪರಿಷತ್ ಚುನಾವಣೆ: ಜೆಡಿಎಸ್ ಅಭ್ಯರ್ಥಿ ವಿವೇಕಾನಂದ ನಾಮಪತ್ರ ಸಲ್ಲಿಕೆ

jds
Published on

ಮೈಸೂರು: ವಿಧಾನ ಪರಿಷತ್ ದಕ್ಷಿಣ ಶಿಕ್ಷಕರ ಕ್ಷೇತ್ರದ ಜೆಡಿಎಸ್-ಬಿಜೆಪಿ ಮೈತ್ರಿಕೂಟದ ಅಭ್ಯರ್ಥಿ ಕೆ. ವಿವೇಕಾನಂದ ಉಭಯ ಪಕ್ಷಗಳ ಮುಖಂ ಡರು, ಕಾರ್ಯಕರ್ತರೊಂದಿಗೆ ಅದ್ಧೂರಿ ಮೆರವಣಿಗೆ ನಡೆಸುವ ಮೂಲಕ ಗುರುವಾರ ನಾಮಪತ್ರ ಸಲ್ಲಿಸಿದರು.

ನಗರದ ಜೆಎಲ್‌ಬಿ ರಸ್ತೆಯ ಗೋವಿಂದರಾವ್ ಮೆಮೋರಿಯಲ್ ಹಾಲ್‌ನಲ್ಲಿ ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿಕೂಟದಿಂದ ಹಮ್ಮಿಕೊಂಡಿದ್ದ ಚುನಾವಣಾ ಸಭೆಯ ಬಳಿಕ ಕಾಲ್ನಡಿಗೆಯಲ್ಲಿ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ವೃತ್ತ, ವಿನೋಬಾ ರಸ್ತೆಯ ಮೂಲಕ ಸಾಗಿ ಪ್ರಾದೇಶಿಕ ಆಯುಕ್ತರ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಲಾಯಿತು.

ಮೈತ್ರಿ ಅಭ್ಯರ್ಥಿ ಕೆ. ವಿವೇಕಾನಂದ ಅವರು ಬಿಜೆಪಿ ಹಾಗೂ ಜೆಡಿಎಸ್ ಮುಖಂಡರ ಜತೆಗೂಡಿ ಚುನಾವಣಾಧಿಕಾರಿ ಡಾ.ಜಿ.ಸಿ.ಪ್ರಕಾಶ್ ಅವರಿಗೆ ನಾಮಪತ್ರ ಸಲ್ಲಿಸಿದರು. ಅಭ್ಯರ್ಥಿ ಜತೆಗೆ ನಾಲ್ವರಿಗೆ ಮಾತ್ರ ಅವಕಾಶ ಇರುವ ಕಾರಣ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ತಡೆಯಲು ಒಂದೊಂದು ಸೆಟ್ ನಾಮಪತ್ರ ಸಲ್ಲಿಸುವ ಸಂದರ್ಭ ಪ್ರತ್ಯೇಕ ಮುಖಂಡರು ಹಾಜರಿದ್ದರು. ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಮಾಜಿ ಉಪ ಮುಖ್ಯಮಂತ್ರಿ ಆರ್.ಅಶೋಕ್, ಸಂಸದ ಬಿ.ವೈ.ರಾಘವೇಂದ್ರ, ಮೈಸೂರು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಶಾಸಕರಾದ ಜಿ.ಟಿ.ದೇವೇಗೌಡ, ಟಿ.ಎಸ್. ಶ್ರೀವತ್ಸ, ಜಿ.ಡಿ.ಹರೀಶ್ ಗೌಡ, ಸಿ.ಎಸ್.ಬಾಲಕೃಷ್ಣ, ಎ.ಮಂಜು, ಮಾಜಿ ಸಚಿವರಾದ ಸಾ.ರಾ.ಮಹೇಶ್, ಸಿ.ಎಸ್.ಪುಟ್ಟರಾಜು, ಮಾಜಿ ಶಾಸಕರಾದ ಕೆ.ಅನ್ನದಾನಿ, ಎಲ್.ನಾಗೇಂದ್ರ, ಕೆ.ಮಹದೇವ್, ಅಶ್ವಿನ್ ಕುಮಾರ್, ವಿಧಾನ ಪರಿಷತ್ ಸದಸ್ಯ ಸಿ.ಎನ್.ಮಂಜೇಗೌಡ ಹಾಗೂ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net