

ನೈರುತ್ಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ.ಕೆ.ಮಂಜುನಾಥ್ ಕುಮಾರ್ ಹಾಗೂ ಪದವೀಧರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಯನೂರು ಮಂಜುನಾಥ್ ಪರವಾಗಿ ಸೋಮವಾರ ಮಡಿಕೇರಿಯಲ್ಲಿ ಕಾಂಗ್ರೆಸ್ ಮುಖಂಡರು ಮತಯಾಚನೆ ನಡೆಸಿದರು.
ಈ ಸಂದರ್ಭದಲ್ಲಿ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷ ತೆನ್ನಿರ ಮೈನಾ ಮಾತನಾಡಿ, ಶಿಕ್ಷಕರ ಕ್ಷೇತ್ರದಿಂದ ಸ್ವತಃ ಶಿಕ್ಷಕರಾದ ಕೆ.ಕೆ.ಮಂಜುನಾಥ್‌ರವರು ಅಭ್ಯರ್ಥಿಯಾಗಿರುವುದರಿಂದ ಮತದಾರರು ಹೆಚ್ಚಿನ ಒಲವು ತೋರುತ್ತಿದ್ದಾರೆ. ಶಿಕ್ಷಕರ ಸಮಸ್ಯೆ ನಿವಾರಣೆಗೆ ಕೆ.ಕೆ.ಮಂಜುನಾಥ್ ಆಯ್ಕೆ ಅನಿವಾರ್ಯ ಎಂದು ತೀರ್ಮಾನಕ್ಕೆ ಬಂದಿದ್ದಾರೆ. ಹಾಗೆ ರಾಜ್ಯ ಮಟ್ಟದ ಮುಖಂಡರಾದ ಅಯನೂರು ಮಂಜುನಾಥ್ ರವರು ಉತ್ತಮ ಆಡಳಿತಗಾರರು ಎಂದು ಖ್ಯಾತರಾಗಿರುವುದರಿಂದ ಕಾಂಗ್ರೆಸ್‌ನ ಇಬ್ಬರು ಅಭ್ಯರ್ಥಿಗಳಿಗೆ ಜಿಲ್ಲೆಯಲ್ಲಿ ಹೆಚ್ಚಿನ ಮತ ಲಭ್ಯವಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಮಾಜಿ ಮೂಡಾ ಅಧ್ಯಕ್ಷರ ಚುಮ್ಮಿ ದೇವಯ್ಯ, ಮಾಜಿ ನಗರ ಸಭಾ ಸದಸ್ಯರಾದ ಪ್ರಕಾಶ್ ಆಚಾರ್ಯ, ಮಡಿಕೇರಿ ನಗರ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಆರ್.ಪಿ.ಚಂದ್ರಶೇಖರ್, ನಗರ ಸಭಾ ಸದಸ್ಯರಾದ ಮಂಡಿರ ಸದಾ ಮುದ್ದಪ್ಪ, ಜಿ.ಸಿ.ಜಗದೀಶ್, ಯಾಕುಬ್ ಸೇರಿದಂತೆ ಪ್ರಮುಖರು ಮತಯಾಚನೆಯಲ್ಲಿ ಭಾಗಿಯಾಗಿದ್ದರು.