ಪರಿಷತ್ ಚುನಾವಣೆ: ಮೈಸೂರಿನಲ್ಲಿ 5 ನಾಮಪತ್ರ ಸಲ್ಲಿಕೆ

vidhanasoudha
Published on

ಮೈಸೂರು: ವಿಧಾನ ಪರಿಷತ್ ದಕ್ಷಿಣ ಶಿಕ್ಷಕರ ಕ್ಷೇತ್ರ, ನೈರುತ್ಯ ಶಿಕ್ಷಕರ ಕ್ಷೇತ್ರ ಹಾಗೂ ನೈರುತ್ಯ ಪದವೀಧರರ ಕ್ಷೇತ್ರದಲ್ಲಿ ಮಂಗಳವಾರ ಒಟ್ಟು 5 ನಾಮಪತ್ರ ಸಲ್ಲಿಕೆಯಾಗಿದೆ.

ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮರಿತಿಬ್ಬೇಗೌಡ, ನೈರುತ್ಯ ಶಿಕ್ಷಕರ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿ ಕೆ.ಕೆ.ಮಂಜುನಾಥ ಕುಮಾರ್, ಪಕ್ಷೇತರ ಅಭ್ಯರ್ಥಿಯಾಗಿ ಟಿ. ಭಾಸ್ಕರ ಶೆಟ್ಟಿ ಹಾಗೂ ಡಾ. ನರೇಶ್ಚಂದ್ರ ಹೆಗ್ಡೆ ನಾಮಪತ್ರ ಸಲ್ಲಿಸಿದ್ದಾರೆ. ನೈರುತ್ಯ ಪದವೀಧರ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ದಿನಕರ್ ಉಳ್ಳಾಲ್ ನಾಮಪತ್ರ ಸಲ್ಲಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net