ಪರಿಷತ್ ಚುನಾವಣೆ ಸಿದ್ಧತೆ ವೀಕ್ಷಕರಿಂದ ಪರಿಶೀಲನೆ

mng-7oct-election meeting
Published on


ಮಂಗಳೂರು : ವಿಧಾನ ಪರಿಷತ್‌ಗೆ ದ.ಕ. ಸ್ಥಳೀಯ ಪ್ರಾಧಿಕಾರ ಕ್ಷೇತ್ರದಿಂದ ನಡೆಯುವ ಉಪ ಚುನಾವಣೆಯ ಸಿದ್ಧತೆಗಳನ್ನು ಚುನಾವಣಾ ಆಯೋಗದ ವೀಕ್ಷಕ ಪಂಕಜ್ ಕುಮಾರ್ ಪಾಂಡೆ ಸೋಮವಾರ ಪರಿಶೀಲಿಸಿದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆೆ ನಡೆಸಿದ ಅವರು ಮತಗಟ್ಟೆಗಳ ಸಿದ್ಧತೆ, ಚುನಾವಣಾ ಸಿಬ್ಬಂದಿ ನೇಮಕ, ಮತ ಪತ್ರಗಳ ಮುದ್ರಣ, ಮತದಾರರ ಪಟ್ಟಿ ಹಾಗೂ ಇತರ ಚುನಾವಣೆ ಸಿದ್ಧತೆಗಳ ಬಗ್ಗೆ ಮಾಹಿತಿ ಪಡೆದರು. ಮತಗಟ್ಟೆ ಸಿಬ್ಬಂದಿಗೆ ತರಬೇತಿ ಹಾಗೂ ಮತ ಎಣಿಕೆ ಕೇಂದ್ರದಲ್ಲಿ ಕೈಗೊಳ್ಳಬೇಕಾದ ವ್ಯವಸ್ಥೆಗಳ ಬಗ್ಗೆ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಮಾತನಾಡಿ ‘ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಒಟ್ಟು 392 ಮತಗಟ್ಟೆಗಳಿದ್ದು 6,032 ಮತದಾರರಿದ್ದಾರೆ. ಈ ಪೈಕಿ 3,127 ಮಹಿಳಾ ಮತದಾರರು ಹಾಗೂ 2,905 ಪುರುಷ ಮತದಾರರಾಗಿದ್ದಾರೆ. ಮತ ಎಣಿಕೆ ಅ.24ರಂದು ಮಂಗಳೂರಿನ ಸಂತ ಅಲೋಶಿಯಸ್ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಲಿದೆ ಎಂದು ತಿಳಿಸಿದರು.
ಉಡುಪಿ ಜಿಲ್ಲಾಧಿಕಾರಿ ವಿದ್ಯಾಕುಮಾರಿ, ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರವಾಲ್, ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ್ ಕೆ., ದ.ಕ.ಜಿಲ್ಲಾ ಪೊಲೀಸ್ ಅಧೀಕ್ಷಕ ಯತೀಶ್, ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಅರುಣ್, ದ.ಕ ಅಪರ ಜಿಲ್ಲಾಧಿಕಾರಿ ಡಾ. ಜಿ .ಸಂತೋಷ್ ಕುಮಾರ್, ಉಡುಪಿ ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net