ಪಾಲಕರ ಕನಸು ನನಸಾಗಿಸುವುದು ಮಕ್ಕಳ ಗುರಿಯಾಗಲಿ

udp-15-parkala
Published on

ಉಡುಪಿ: ವಿದ್ಯಾರ್ಥಿಗಳು ಕೇವಲ ಪಠ್ಯಗಳಿಗೆ ಮೀಸಲಾಗದೆ ಪಠ್ಯೇತರ ಚಟುವಟಿಕೆಗಳಲ್ಲೂ ಪಾಲ್ಗೊಳ್ಳಬೇಕು. ಪಾಲಕರ ಕನಸನ್ನು ನನಸಾಗಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷಿ$್ಮ ಹೆಬ್ಬಾಳಕರ್​ ತಿಳಿಸಿದರು.

ಪರ್ಕಳದಲ್ಲಿರುವ ಶೆಟ್ಟಿಬೆಟ್ಟು ಸರ್ಕಾರಿ ಸಂಯುಕ್ತ ಪ್ರೌಢಶಾಲೆಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ 'ಸುಜ್ಞಾನ ಸಭಾಂಗಣ ಉದ್ಘಾಟಿಸಿ ಮಾತನಾಡಿದರು. ಮಕ್ಕಳು ಜೀವನದಲ್ಲಿ ಯಶಸ್ವಿಯಾಗಲು ಹಿರಿಯರನ್ನು ಆದರ್ಶ ವಾಗಿ ಇಟ್ಟುಕೊಳ್ಳಬೇಕು. ಶೈಕ್ಷಣಿಕ ಮೂಲಸೌಕರ್ಯ ಬೆಳೆಸುವುದು ಇಂದಿನ ಅತ್ಯಗತ್ಯ ಎಂದರು.

ಇವತ್ತಿನ ದಿನಗಳಲ್ಲಿ ಮೊಬೈಲ್​ ಎಂಬ ಹೂವಿನೊಳಗೆ ಮಕ್ಕಳು ಮಕರಂದವನ್ನು ಹೀರುತ್ತಿದ್ದಾರೆ. ನಾಳೆ ಒಳ್ಳೆಯದಾಗುತ್ತದೆ ಎಂದು ಭಾವಿಸುತ್ತಿದ್ದಾರೆ. ಆದರೆ ಅಷ್ಟರಲ್ಲಿ ಕಾಲ ಕಳೆದುಹೋಗುತ್ತದೆ. ಪುನ@ ಮರಳಿ ಬರುವುದಿಲ್ಲ. ಹಾಗಾಗಿ ಮಕ್ಕಳು, ಪಾಲಕರು, ಶಿಕ್ಷಕರು ಸೇರಿದಂತೆ ನಾವೆಲ್ಲ ಬಹಳಷ್ಟು ಯೋಚಿಸಬೇಕಾದ ಸಂದರ್ಭದಲ್ಲಿದ್ದೇವೆ ಎಂದು ಹೇಳಿದರು.

ಉಡುಪಿ ಜಿಲ್ಲೆಯು ಶಿಕ್ಷಣ ಕಾಶೀ ಎಂದೇ ಹೆಸರುವಾಸಿಯಾಗಿದೆ. ಮಕ್ಕಳು ತಮ್ಮ ವಿದ್ಯಾರ್ಥಿ ಜೀವನದಿಂದಲೇ ಸಮಾಜದಲ್ಲಿ ಉನ್ನತ ಸ್ಥಾನ ಅಲಂಕರಿಸಬೇಕು ಎಂಬ ಇಚ್ಛಾಶಕ್ತಿ ಹೊಂದಿರಬೇಕು. ಮಕ್ಕಳಲ್ಲಿ ಒಂದಲ್ಲಾ ಒಂದು ರೀತಿಯ ಪ್ರತಿಭೆಗಳು ಇರುತ್ತವೆ. ಸುಜ್ಞಾನ ಅಂದರೆ ಒಳ್ಳೆಯ ಜ್ಞಾನ. ಅದು ಈ ವೇದಿಕೆಯ ಮೂಲಕ ಅದು ಅನಾವರಣಗೊಳ್ಳುವಂತಾಗಲಿ. ಸಭಾಂಗಣವು ಸೃಜನಶೀಲತೆ, ನಾವೀನ್ಯತೆ ಮತ್ತು ಶೈಕ್ಷಣಿಕ ಶ್ರೇಷ್ಠತೆಯ ಕೇಂದ್ರವಾಗಲಿ ಎಂದು ಶುಭ ಹಾರೈಸಿದರು.

ಶಾಸಕ ಯಶ್ಪಾಲ್​ ಸುವರ್ಣ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಅಶೋಕ್​ ಕುಮಾರ್​ ಕೊಡವೂರು, ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ರಮೇಶ್​ ಕಾಂಚನ್​, ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ, ಜಿಲ್ಲಾ ಪಂಚಾಯಿತಿ ಸಿಇಒ ಪ್ರತಿಕ್​ ಬಾಯಲ್​, ಡಿಡಿಪಿಐ ಲೋಕೇಶ್​, ಬಿಇಒ ಶಬಾನಾ ಅಂಜುಂ, ಅಶ್ವಿನಿ ಪೂಜಾರಿ, ಸುಕೇಶ್​ ಕುಂದರ್​ ಉಪಸ್ಥಿತರಿದ್ದರು. ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸುಕೇಶ್​ ಕುಂದರ್​ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಾಲಾ ಮುಖ್ಯೋಪಾಧ್ಯಾಯ ರಾಮಕೃಷ್ಣ ನಾಯಕ್​ ಸ್ವಾಗತಿಸಿ, ಪ್ರಶಾಂತ್​ ಶೆಟ್ಟಿ ಹಾಗೂ ಅಮೃತ್​ ರಾಜ್​ ನಿರೂಪಿಸಿ, ರತ್ನಾ ಕೆ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net