ಮುಖ್ಯರಸ್ತೆ ಬದಿಯಲ್ಲಿ ಆಟೋಗಳ ನಿಲುಗಡೆಗೆ ಸ್ಥಳ

6.npk-1
ನಾಪೋಕ್ಲು ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಪಂಚಾಯಿತಿ ಅಧ್ಯಕ್ಷ ವನಜಾಕ್ಷಿ ರೇಣುಕೇಶ್ ಅಧ್ಯಕ್ಷತೆಯಲ್ಲಿ ಆಟೋ ಚಾಲಕರು ಮತ್ತು ಮಾಲೀಕರಿಗೆ ಸಂಬಂಧಿಸಿದಂತೆ ಸಭೆ ನಡೆಯಿತು.
Published on

ನಾಪೋಕ್ಲು: ಪಟ್ಟಣದ ಮುಖ್ಯರಸ್ತೆಯ ಬದಿಯಲ್ಲಿ ಆಟೋಗಳ ನಿಲುಗಡೆಗೆ ಸ್ಥಳ ಕಲ್ಪಿಸಲು ಪರಿಶೀಲಿಸಲಾಗುವುದು ಎಂದು ಇಲ್ಲಿನ ಪೊಲೀಸ್ ಠಾಣೆಯ ಠಾಣಾಧಿಕಾರಿ ಮಂಜುನಾಥ್ ಹೇಳಿದರು.

ಇಲ್ಲಿನ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಪಂಚಾಯಿತಿ ಅಧ್ಯಕ್ಷೆ ವನಜಾಕ್ಷಿ ರೇಣುಕೇಶ್ ಅಧ್ಯಕ್ಷತೆಯಲ್ಲಿ ಬುಧವಾರ ಆಯೋಜಿಸಿದ್ದ ಆಟೋ ಮಾಲೀಕರು ಮತ್ತು ಚಾಲಕರ ಸಂಘದ ಬೇಡಿಕೆಗಳಿಗೆ ಸಂಬಂಧಿಸಿದ ಸಭೆಯಲ್ಲಿ ಮಾತನಾಡಿದರು.

ಪಟ್ಟಣದಲ್ಲಿ 200ಕ್ಕೂ ಅಧಿಕ ಆಟೋಗಳಿದ್ದು ನಿಲುಗಡೆಗೆ ಸಮಸ್ಯೆಯಾಗುತ್ತಿದೆ. ಸ್ಥಳಾವಕಾಶ ಸಾಕಾಗುತ್ತಿಲ್ಲ .ಮುಖ್ಯರಸ್ತೆಯಲ್ಲೂ ಆಟೋಗಳ ನಿಲುಗಡೆಗೆ ಅವಕಾಶ ಕಲ್ಪಿಸಿಕೊಡಬೇಕು ಎಂದು ಸಂಘದ ಪದಾಧಿಕಾರಿಗಳು ಈ ಹಿಂದೆ ಗ್ರಾಮ ಪಂಚಾಯಿತಿ ಹಾಗೂ ಪೊಲೀಸ್ ಠಾಣೆಗೆ ಮನವಿ ಸಲ್ಲಿಸಿ ಗಡುವು ನೀಡಿದ್ದರು.

ಈ ಬಗ್ಗೆ ಪ್ರತಿಕ್ರಿಯಿಸಿದ ಠಾಣಾಧಿಕಾರಿ ಮಂಜುನಾಥ್ ಆಟೋಗಳ ನಿಲುಗಡೆಗೆ ಹಲವು ಸಮಸ್ಯೆಗಳಿದ್ದು ಪರಿಶೀಲಿಸಿ ಮೇಲಧಿಕಾರಿಗಳಿಗೆ ಮಾಹಿತಿ ನೀಡಿ ಕ್ರಮಕೈಗೊಳ್ಳುವುದಾಗಿ ಭರವಸೆ ನೀಡಿದರು.

ಸಭೆಯಲ್ಲಿ ಪಂಚಾಯಿತಿ ಸದಸ್ಯರಾದ ಮಹಮ್ಮದ್ ಖುರೇಶಿ, ಶಿವಚಳಿಯಂಡ ಜಗದೀಶ್, ಮಾಚೇಟಿರ ಕುಸು ಕುಶಾಲಪ್ಪ, ಬಿ.ಎಂ. ಪ್ರತೀಪ, ಆಟೋ ಚಾಲಕ ಮತ್ತು ಮಾಲೀಕರ ಸಂಘದ ಅಧ್ಯಕ್ಷ ಸುಕುಮಾರ್, ಉಪಾಧ್ಯಕ್ಷ ರಶೀದ್, ಕಾರ್ಯದರ್ಶಿ ಸತೀಶ್, ಮಾಜಿ ಅಧ್ಯಕ್ಷ ರಜಾಕ್ ಸೇರಿದಂತೆ ಸಂಘದ ಪದಾಧಿಕಾರಿಗಳು, ಸದಸ್ಯರು ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net