ಸಂಸತ್ತಿನಲ್ಲಿ ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಅಶೋಕ ಗಸ್ತಿ

Ashok Gasti Rajya Sabha Member
ದೆಹಲಿಯ ಸಂಸತ್ತಿನಲ್ಲಿ ನೂತನ ರಾಜ್ಯಸಭಾ ಸದಸ್ಯರಾಗಿ ರಾಯಚೂರಿನ ಅಶೋಕ ಗಸ್ತಿ ಬುಧವಾರ ಪ್ರಮಾಣ ವಚನ ಸ್ವೀಕರಿಸಿದರು.
Published on

ರಾಯಚೂರು: ರಾಜ್ಯದ ವಿಧಾನಸಭೆಯಿಂದ ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾಗಿರುವ ನಗರದ ಅಶೋಕ ಗಸ್ತಿ ಸಂಸತ್ತಿನಲ್ಲಿ ಬುಧವಾರ ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.

ರಾಜ್ಯದ ಘಟಾನುಘಟಿ ನಾಯಕರು ಸ್ಪರ್ಧೆಯಲ್ಲಿದ್ದರೂ ರಾಜ್ಯಸಭಾ ಚುನಾವಣೆಯಲ್ಲಿ ಟಿಕೆಟ್ ಗಿಟ್ಟಿಸಿಕೊಂಡು ಆಯ್ಕೆಯಾಗಿದ್ದ ಅಶೋಕ ಗಸ್ತಿ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಪಕ್ಷದ ಸಂಘಟನೆ ಕಾರ್ಯದಲ್ಲಿ ತೊಡಗಿದ್ದ ಅಶೋಕ ಗಸ್ತಿಯವರ ಪಕ್ಷ ನಿಷ್ಠೆಯನ್ನು ಗುರುತಿಸಿ ಬಿಜೆಪಿ ಹಿರಿಯ ನಾಯಕರು ರಾಜ್ಯಸಭಾ ಚುನಾವಣೆಗೆ ಪಕ್ಷದಿಂದ ಸ್ಪರ್ಧೆಗೆ ಅವಕಾಶ ನೀಡಿದ್ದರು. ಕರೊನಾ ಹಿನ್ನೆಲೆಯಲ್ಲಿ ಪ್ರಮಾಣ ವಚನ ಸ್ವೀಕರಿಸಲು ವಿಳಂಬವಾಗಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net