ಬಾರ್ಮೆರ್-ಯಶವಂತಪುರ ರೈಲು ಮೈಸೂರಿಗೆ ವಿಸ್ತರಣೆಗೆ ಮನವಿ ಸಲ್ಲಿಸಿದ ಸಂಸದ ಪ್ರತಾಪ್ ಸಿಂಹ

33
Published on

ಮೈಸೂರು: ಬಾರ್ಮೆರ್-ಯಶವಂತಪುರ ರೈಲನ್ನು ಮೈಸೂರಿನವರೆಗೆ ವಿಸ್ತರಿಸುವಂತೆ ಹಾಗೂ ಮೈಸೂರಿನಿಂದ ರಾಮೇಶ್ವರಂಗೆ ವಾರಕ್ಕೊಮ್ಮೆ ರೈಲು ಪ್ರಾರಂಭಿಸುವಂತೆ ಸಂಸದ ಪ್ರತಾಪ್ ಸಿಂಹ ಗುರುವಾರ ದೆಹಲಿಯಲ್ಲಿ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದಾರೆ.

ಮನವಿಗೆ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಶೀಘ್ರದಲ್ಲೇ ಅನುಮೋದನೆ ನೀಡಲಿದ್ದಾರೆ ಹಾಗೂ ರೈಲ್ವೆ ಹಾಗೂ ಟೆಲಿಕಾಂ ಸಚಿವಾಲಯದ ವ್ಯಾಪ್ತಿಗೆ ಒಳಪಡುವ ಮೈಸೂರು ನಗರದ ಈ ಕೆಳಕಂಡ ಮುಕ್ತಾಯಗೊಂಡಿರುವ ಕಾಮಗಾರಿಗಳನ್ನು ಉದ್ಘಾಟನೆ ಮಾಡಿಕೊಡುವಂತೆ ಸಚಿವರಿಗೆ ಆಹ್ವಾನ ನೀಡಲಾಗಿದೆ ಎಂದು ಸಂಸದ ಪ್ರತಾಪ್ ಸಿಂಹ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಡಕೊಳ ಬಳಿ 55 ಎಕರೆ ಜಾಗದಲ್ಲಿ ಕಂಟೈನರ್ ಕಾರ್ಪೋರೇಷನ್ ಆಫ್ ಇಂಡಿಯಾದ ವತಿಯಿಂದ 102 ಕೋಟಿ ರೂ. ವೆಚ್ಚದಲ್ಲಿ ರೈಲ್ವೆ ಗೂಡ್ಸ್ ಟರ್ಮಿನಲ್ ನಿರ್ಮಿಸಲಾಗುತ್ತಿದೆ. ಸುಮಾರು 30 ಕೋಟಿ ರೂ. ವೆಚ್ಚದಲ್ಲಿ ಮೈಸೂರು ನಗರದ ಅಶೋಕಪುರಂ ರೈಲ್ವೆ ಯಾರ್ಡ್ ಅನ್ನು ಒಂದು ಸುಸಜ್ಜಿತವಾದ ಸ್ಟೇಷನ್, ಫುಟ್ ಓವರ್ ಬ್ರಿಡ್ಜ್, 2 ಪ್ಲಾಟ್ ಫಾರ್ಮ್, 2 ಸ್ಟೇಬಲಿಂಗ್ ಲೈನ್ ಹಾಗೂ ಪಾರ್ಕಿಂಗ್ ವ್ಯವಸ್ಥೆಯನ್ನು ಒಳಗೊಂಡಂತೆ ಅಭಿವೃದ್ಧಿ ಪಡಿಸಲಾಗಿದೆ. ಮೈಸೂರು ನಗರ ಹೊರವಲಯದಲ್ಲಿರುವ ಹೆಬ್ಬಾಳ ಕೈಗಾರಿಕ ಪ್ರದೇಶದಲ್ಲಿ (ಇನ್ಫೋಸಿಸ್ ಬಳಿ) 27.64 ಕೋಟಿ ರೂ. ವೆಚ್ಚದಲ್ಲಿ ಎಸ್‌ಡಿಪಿಐ (ಸಾಫ್ಟ್‌ವೇರ್ ಟೆಕ್ನಾಲಜಿ ಪಾರ್ಕ್ ಆಫ್ ಇಂಡಿಯಾ) ನಿರ್ಮಾಣಗೊಂಡಿದೆ ಎಂದು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net