ಬಳ್ಳಾರಿ ; ವಿದ್ಯಾರ್ಥಿಗಳು ಓದಿನ ಜತೆಗೆ ಸಾಂಸ್ಕೃತಿಕ ತರಬೇತಿಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ ಎಂದು ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಗಾದಿಲಿಂಗಪ್ಪ ಹೇಳಿದರು.
ಇಲ್ಲಿನ ಕೌಲಬಜಾರ್‌ನ ಪರಿಶಿಷ್ಟ ವರ್ಗಗಳ ಸರ್ಕಾರಿ ಮೆಟ್ರಿಕ್ ನಂತರ ಬಾಲಕಿಯರ ವಸತಿ ನಿಲಯದಲ್ಲಿ ಕನ್ನಡ ಮತ್ತು ಸಂಸ್ಕೃತಿ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಹಯೋಗದೊಂದಿಗೆ ಶುಕ್ರವಾರ ಆಯೋಜಿಸಿದ್ದ ಪರಿಶಿಷ್ಟ ಪಂಗಡದ ವಿದ್ಯಾರ್ಥಿನಿಯರಿಗೆ ಶಾಸ್ತ್ರೀಯ ನೃತ್ಯ ಕಲಿಕಾ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಪ್ರೋತ್ಸಾಹದಾಯಕ ಕಲೆಗಳಲ್ಲಿ ಒಂದಾದ ಶಾಸ್ತ್ರೀಯ ನೃತ್ಯವು ಜೀವನಕ್ಕೆ ಉತ್ಸಾಹ ತುಂಬುತ್ತದೆ. ವಿದ್ಯಾರ್ಥಿಗಳು ಇಂತಹ ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು ವಿವಿಧ ಕಲೆಗಳಲ್ಲಿ ಯಾವುದೇ ಭಯವಿಲ್ಲದೆ ಭಾಗವಹಿಸಿ ತಮ್ಮದೇ ಆದ ಛಾಪು ಮೂಡಿಸಬೇಕು ಎಂದರು. ಬಳಿಕ ವಿದ್ಯಾರ್ಥಿನಿಯರಿಗೆ ಶಾಸ್ತಿಥಯ ನೃತ್ಯ ಕಲಿಕಾ ತರಬೇತಿ ನಡೆಸಲಾಯಿತು.