ಪಠ್ಯ, ಪಠ್ಯೇತರ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಿ

IMG20250919201731.jpg
Published on

ಧಾರವಾಡ: ವಿದ್ಯಾರ್ಥಿಗಳು ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗಳಲ್ಲಿ ಸಕ್ರೀಯವಾಗಿ ಪಾಲ್ಗೊಂಡು ವ್ಯಕ್ತಿತ್ವ ರೂಪಿಸಿಕೊಳ್ಳಬೇಕು ಎಂದು ಡಾ. ಅಜಿತ ಪ್ರಸಾದ ಹೇಳಿದರು.

ಜೆ.ಎಸ್.ಎಸ್. ಶ್ರೀ ಮಂಜುನಾಥೇಶ್ವರ ಪದವಿಪೂರ್ವ ವಿಜ್ಞಾನ ವಾಣಿಜ್ಯ ಹಾಗೂ ಕಲಾ ಮಹಾವಿದ್ಯಾಲಯದ 2025-26ನೇ ಸಾಲಿನ ಸಾಂಸ್ಕೃತಿಕ ಹಾಗೂ ಕ್ರೀಡಾ ಚಟುವಟಿಕೆಗಳ ಉದ್ಘಾಟನಾ ಸಮಾರಂಭ ನೆರವೇರಿಸಿ ಮಾತನಾಡಿದರು. ಸಂಸ್ಥೆಯು ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡುತ್ತ ಬಂದಿದ್ದು ಜಿಲ್ಲಾಮಟ್ಟ ಮತ್ತು ರಾಜ್ಯಮಟ್ಟದಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಕಾಲೇಜಿನ ಶುಲ್ಕದಲ್ಲಿ ಸಂಪೂರ್ಣ ವಿನಾಯತಿ ನೀಡುತ್ತಿರುವುದರ ಲವಾಗಿ ನಮ್ಮ ಸಂಸ್ಥೆಯು ಕರ್ನಾಟಕ ವಿಶ್ವವಿದ್ಯಾಲಯದಿಂದ 12 ಬಾರಿ ಚಾಂಪಿಯನ್‌ಶಿಪ್ ಪಡೆದುಕೊಂಡಿರುವುದು ಹೆಮ್ಮೆಯ ಸಂಗತಿ ಎಂದರು.

ಹುಕ್ಕೇರಿಕರ್ ರಾಮರಾಯದಿಂದ ಸ್ಥಾಪಿತವಾದ ಈ ಸಂಸ್ಥೆಯು ಇಂದು ಉತ್ತರ ಕರ್ನಾಟಕದಲ್ಲಿಯೇ ಪ್ರತಿಷ್ಠಿತ ಸಂಸ್ಥೆಯಾಗಿ ಬೆಳೆದಿದೆ. ಇದಕ್ಕೆಲ್ಲ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ದೂರದೃಷ್ಟಿ ಮತ್ತು ದಿವಂಗತ ಡಾ.ನ.ವಜ್ರಕುಮಾರ್ ಅವರ ಕಾಳಜಿ ಮತ್ತು ತ್ಯಾಗ ದೊಡ್ಡದಾಗಿದೆ ಎಂದರು.

ಧಾರವಾಡ ಪ್ರಾದೇಶಿಕ ವಿಜ್ಞಾನ ಕೇಂದ್ರದ ನಿರ್ದೇಶಕ ಡಾ.ವಿ.ಡಿ.ಬೋಳಿಶೆಟ್ಟಿ ಮಾತನಾಡಿ, ವಿಜ್ಞಾನದ ವಿಷಯಗಳನ್ನು ಇಂದು ಬೇರೆ ಬೇರೆ ತಂತ್ರ ವಿಧಾನಗಳಿಂದ ಭೋದಿಸಲಾಗುತ್ತಿದೆ. ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ಮೋಜಿನೊಂದಿಗೆ ವಿಜ್ಞಾನದ ವಿಷಯ ಕಲಿಸಲಾಗುತ್ತಿದೆ. ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.

ಕಾಲೇಜಿನ ಪ್ರಾಚಾರ್ಯ ರವಿವರ್ಮ ಜೋಶಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ನೂತನ ಆಡಳಿತ ಅಧಿಕಾರಿ ಹರಿಹಂತ ಪ್ರಸಾದ, ಎಂ.ಸಿ.ಎ. ಕಾಲೇಜಿನ ನಿರ್ದೇಶಕ ಡಾ.ಸೂರಜ ಜೈನ, ಕ್ರೀಡಾ ನಿರ್ದೇಶಕ ಪವನ್ ಗೊರವ, ವಿದ್ಯಾರ್ಥಿ ಪ್ರಧಾನ ಕಾರ್ಯದರ್ಶಿ ಸನ್ಮತಿ ತಿಪ್ಪಣ್ಣವರ, ಜಂಟಿ ಪ್ರಧಾನ ಕಾರ್ಯದರ್ಶಿ ಡಿಂಕಲ್ ಪುರೋಹಿತ ವೇದಿಕೆಯಲ್ಲಿದ್ದರು. ದೀಪಾ ಪೂಜಾರ ಹಾಗೂ ಸಂಗಡಿಗರು ಪ್ರಾರ್ಥಿಸಿದರು. ಡಾ.ಎಸ್.ಕೆ.ನಡುವಿನಕೇರಿ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net