

ಹಿರೇಕೆರೂರ: ವಿದ್ಯಾರ್ಥಿಗಳು ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಯಲ್ಲಿ ಸಕ್ರೀಯವಾಗಿ ಪಾಲ್ಗೊಳ್ಳಬೇಕು. ಕ್ರೀಡೆಯಲ್ಲಿ ಭಾಗವಹಿಸುವುದರಿಂದ ದೈಹಿಕ ಹಾಗೂ ಮಾನಸಿಕವಾಗಿ ಸದೃಢರಾಗಲು ಸಾಧ್ಯವಾಗುತ್ತದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎನ್. ಶ್ರೀಧರ ಹೇಳಿದರು.
ತಾಲೂಕಿನ ನೂಲಗೇರಿ ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಸೋಮವಾರ ಆಯೋಜಿಸಿದ್ದ ಬಾಳಂಬೀಡ ವಲಯ ಮಟ್ಟದ ಪ್ರೌಢಶಾಲಾ ಮಕ್ಕಳ ಕ್ರೀಡಾಕೂಟಗಳ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಪ್ರತಿಯೊಬ್ಬ ಮಗುವಿನಲ್ಲಿಯೂ ಪ್ರತಿಭೆ ಇರುತ್ತದೆ. ವಿದ್ಯಾರ್ಥಿಗಳು ಕ್ರೀಡಾಸಕ್ತಿ ಹೆಚ್ಚಿಸಿಕೊಂಡು ಕ್ರೀಡೆಗಳಲ್ಲಿ ಸಕ್ರೀಯವಾಗಿ ಪಾಲ್ಗೊಳ್ಳಬೇಕು. ಕ್ರೀಡೆಯಲ್ಲಿ ಸೋಲು-ಗೆಲುವು ಇರುತ್ತದೆ. ಸೋಲು ಗೆಲುವಿನ ಮೆಟ್ಟಿಲು, ಸೋಲನ್ನು ಸವಾಲಾಗಿ ಸ್ವೀಕರಿಸಿದಾಗ ಮಾತ್ರ ಜೀವನದಲ್ಲಿ ಮುಂದೆ ಬರಲು ಸಾಧ್ಯವಾಗುತ್ತದೆ. ನಿರ್ಣಾಯಕರು ತಾರತಮ್ಯ ಮಾಡದೇ ನ್ಯಾಯಯುತ ತೀರ್ಪು ನೀಡುವ ಮೂಲಕ ಉತ್ತಮ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸಬೇಕು ಎಂದರು.
ಅಬಲೂರು ಗ್ರಾಪಂ ಅಧ್ಯಕ್ಷೆ ರೇಣುಕಾ ವೀರಾಪುರ ಅಧ್ಯಕ್ಷತೆ ವಹಿಸಿದ್ದರು. ಗ್ರಾಪಂ ಸದಸ್ಯ ವಿನಯಕುಮಾರ ದಳವಾಯಿ ಎಸ್ಡಿಎಂಸಿ ಉಪಾಧ್ಯಕ್ಷ ಗಣೇಶ ತಾವರಗಿ, ಪ್ರಾಚಾರ್ಯ ಕೆ.ಸಿ. ಉಕ್ಕುಂದ, ಉಪಪ್ರಾಚಾರ್ಯ ಸಿ.ಎನ್. ಲಮಾಣಿ, ಗ್ರಾಪಂ ಸದಸ್ಯರು, ಎಸ್ಡಿಎಂಸಿ ಪದಾಧಿಕಾರಿಗಳು, ಗ್ರಾಮಸ್ಥರು, ಬಾಳಂಬೀಡ ವಲಯ ಮಟ್ಟದ ಪ್ರೌಢಶಾಲೆಗಳ ಶಿಕ್ಷಕರು ಹಾಗೂ ಕ್ರೀಡಾಪಟುಗಳು ಇದ್ದರು.</