ಕೌಶಲ ತರಬೇತಿಗಳಲ್ಲಿ ಪಾಲ್ಗೊಳ್ಳಲಿ

18blh2
Published on

ಬೈಲಹೊಂಗಲ: ಇಂದಿನ ಯುವ ಪದವಿ ವಿದ್ಯಾರ್ಥಿಗಳು ಕೌಶಲ ತರಬೇತಿ ನೀಡುವಂತಹ ಕಾರ್ಯಕ್ರಮಗಳಲ್ಲಿ ಭಾಗವಹಿಸಬೇಕು ಎಂದು ಕಿತ್ತೂರು ರಾಣಿ ಚನ್ನಮ್ಮ ಶಿಕ್ಷಣ ಸಂಸ್ಥೆ ನಿರ್ದೇಶಕ ದೀಪಕ ಸಂಗೊಳ್ಳಿ ಹೇಳಿದರು.

ಶನಿವಾರ ಅಗಸ್ತ್ಯ ಅಂತಾರಾಷ್ಟ್ರೀಯ ಪ್ರತಿಷ್ಠಾನ ಹಾಗೂ ಅಡೂಬೆ ಕಂಪನಿ ಮತ್ತು ಕಿತ್ತೂರು ರಾಣಿ ಚನ್ನಮ್ಮ ಶಿಕ್ಷಣ ಸಂಸ್ಥೆಯ ಎ.ಬಿ. ಪಾಟೀಲ ಶಿಕ್ಷಣ ಮಹಾವಿದ್ಯಾಲಯ ಆಶ್ರಯದಲ್ಲಿ ಮಹಾವಿದ್ಯಾಲಯದಲ್ಲಿ ಸೃಜನಾತ್ಮಕ ಕೌಶಲ ವಿನ್ಯಾಸ ಸ್ಪರ್ಧೆ ಉದ್ಘಾಟಿಸಿ ಅವರು ಮಾತನಾಡಿದರು

ಕಾರ್ಯಕ್ರಮದ ಸಂಚಾಲಕ ದಯಾನಂದ ರಾಠೋಡ ಮಾತನಾಡಿ, ಆಧುನಿಕ ಯುಗದಲ್ಲಿ ಡಿಜಿಟಲ್ ಕೌಶಲ ಮಕ್ಕಳ ಮುಂದಿನ ಜೀವನಕ್ಕೆ ಉಪಯೋಗವಾಗಲಿದೆ. ಈ ನಿಟ್ಟಿನಲ್ಲಿ ಶಿಕ್ಷಣದ ಜತೆ ಕೌಶಲ ಬೆಳೆಸಿಕೊಳ್ಳುವುದು ಅನಿವಾರ್ಯ ಎಂದು ತಿಳಿಸಿದರು.

ಮಹಾವಿದ್ಯಾಲಯದ ಪ್ರಾಚಾರ್ಯೆ ಡಾ.ಎಂ.ಬಿ. ತಲ್ಲೂರ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಐ.ಕ್ಯೂ.ಎ.ಸಿ ಕೋ ಆಡಿನೇಟರ್ ಡಾ.ಎಸ್.ಬಿ. ಕರಡಿಗುದ್ದಿ ನ್ಯಾಕ್ ಕೋ-ಆರ್ಡಿನೇಟರ್ ಪಿ.ಎಂ.ಆಯಾಚಿತ, ಬಿ.ಬಿ.ಎ ಮಹಾವಿದ್ಯಾಲಯದ ಪ್ರಾಚಾರ್ಯ ಎಸ್.ಎ.ದೇಶಮುಖ ಇತರರಿದ್ದರು.

ಶ್ರೀ ಎಸ್.ಕೆ.ಶಿಕ್ಷಣ ಮಹಾವಿದ್ಯಾಲಯ ಸವದತ್ತಿಯ 25 ಪ್ರಶಿಕ್ಷಣಾರ್ಥಿಗಳು ಹಾಗೂ ಕಿತ್ತೂರು ರಾಣಿ ಚನ್ನಮ್ಮ ಶಿಕ್ಷಣ ಸಂಸ್ಥೆಯ ಎ.ಬಿ.ಪಾಟೀಲ ಶಿಕ್ಷಣ ಮಹಾವಿದ್ಯಾಲಯದ 25 ಪ್ರಶಿಕ್ಷಣಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net