ಎಸ್‌ಎಂಕೆ ಪುಣ್ಯಸ್ಮರಣೆಯಲ್ಲಿ ಪಾಲ್ಗೊಳ್ಳಿ

19M.D.R.2
ಮದ್ದೂರು ತಾಲೂಕಿನ ಸೋಮನಹಳ್ಳಿಯ ಕಾಫಿ ಡೇ ಆವರಣದಲ್ಲಿ ನಡೆಯುವನಡೆಯುವ ಎಸ್.ಎಂ.ಕೃಷ್ಣ ಅವರ ಪುಣ್ಯಸ್ಮರಣೆ ಸ್ಥಳವನ್ನು ಶಾಸಕ ಕೆ.ಎಂ.ಉದಯ್ ಗುರುವಾರ ಪರಿಶೀಲಿಸಿದರು.
Published on

ಮದ್ದೂರು: ರಾಜ್ಯ ಹಾಗೂ ರಾಷ್ಟ್ರ ಕಂಡ ಹಿರಿಯ ರಾಜಕಾರಣಿ ಎಸ್.ಎಂ.ಕೃಷ್ಣ ಅವರ ಪುಣ್ಯಸ್ಮರಣೆ ಕಾರ್ಯಕ್ರಮಕ್ಕೆ ಪಕ್ಷಾತೀತವಾಗಿ ಎಲ್ಲರೂ ಭಾಗವಹಿಸಬೇಕೆಂದು ಶಾಸಕ ಕೆ.ಎಂ.ಉದಯ್ ಕರೆ ನೀಡಿದರು.

ಪಟ್ಟಣದ ಶಿವಪುರದಲ್ಲಿರುವ ಶಾಸಕರ ಕಚೇರಿಯಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಸ್.ಎಂ.ಕೃಷ್ಣ ಅವರ ಪುಣ್ಯಸ್ಮರಣೆ ಸೋಮನಹಳ್ಳಿಯ ಕಾಫೀ ಡೇ ಆವರಣದಲ್ಲಿ ಶನಿವಾರ ಬೆಳಗ್ಗೆ ನಡೆಯಲಿದ್ದು, ತಾಲೂಕಿನ ಜನತೆ ಪಕ್ಷತೀತವಾಗಿ ಅಗಲಿದ ಮಹಾನ್ ಚೇತನ ಎಸ್.ಎಂ.ಕೃಷ ಅವರ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಭಾಗಿಯಾಗುವ ಮುಖಾಂತರ ನುಡಿ ನಮನವನ್ನು ಸಲ್ಲಿಸಬೇಕೆಂದು ಕೋರಿದರು.

ಎಸ್.ಎಂ.ಕೃಷ್ಣ ಅವರು ಈ ರಾಜ್ಯದ ಮುಖ್ಯಮಂತ್ರಿ ಆಗಿ ಐಟಿ, ಬಿಟಿ ಕ್ಷೇತ್ರ, ಹೆದ್ದಾರಿ ನಿರ್ಮಾಣ, ಸ್ತ್ರೀ ಶಕ್ತಿ, ಸ್ವ ಸಹಾಯ ಸಂಘ, ಸರ್ಕಾರಿ ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ಸೇರಿದಂತೆ ಹತ್ತಾರು ಅಭಿವೃದ್ಧಿ ಯೋಜನೆಗಳನ್ನು ಈ ರಾಜ್ಯಕ್ಕೆ ಕೊಡುಗೆಯಾಗಿ ನೀಡಿದ್ದಾರೆ. ಅವರ ಅಭಿವೃದ್ಧಿ ಪೂರಿತ ಯೋಜನೆಗಳನ್ನು ರಾಜ್ಯದ ಜನತೆ ಎಂದಿಗೂ ಮರೆಯವುದಿಲ್ಲ ಎಂದರು.

ವಿದೇಶಾಂಗ ಸಚಿವರಾಗಿ, ಮಹಾರಾಷ್ಟ್ರದ ರಾಜ್ಯಪಾಲರಾಗಿ ಹಾಗೂ ರಾಜ್ಯಸಭಾ ಸದಸ್ಯರಾಗಿ ದೇಶದ ಅತ್ಯುನ್ನತ ಹುದ್ದೆಗಳನ್ನು ಯಶಸ್ವಿಯಾಗಿ ಜನಪರತೆಯಿಂದ ನಿಭಾಯಿಸಿದ ದಕ್ಷ ರಾಜಕಾರಣಿಗಳಿದ್ದರು. ಅವರ ನಿಧನ ರಾಜ್ಯಕ್ಕೆ ತುಂಬಲಾರದ ದುಃಖ ಹಾಗೂ ನೋವುಂಟು ಮಾಡಿದೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net