ಓದಿನೊಂದಿಗೆ ಕ್ರೀಡೆಯಲ್ಲಿ ಭಾಗವಹಿಸಿ

Participate in sports with reading
ಗುಳೇದಗುಡ್ಡದ ಎಸ್.ಆರ್. ಶೆಟ್ಟರ್ ಸ್ವತಂತ್ರ ಪಪೂ ಕಾಲೇಜಿನ ಕ್ರೀಡಾ ಮತ್ತು ಸಾಂಸ್ಕೃತಿಕ ಚಟುವಟಿಕೆ ಕಾರ್ಯಕ್ರಮವನ್ನು ಸಂಸ್ಥೆ ಸಂಸ್ಥಾಪಕ ಅಧ್ಯಕ್ಷ ಹೊಳಬಸು ಶೆಟ್ಟರ್ ಉದ್ಘಾಟಿಸಿದರು. ಸಂಸ್ಥೆ ಅಧ್ಯಕ್ಷ ಮಹಾಂತಯ್ಯ ಸರಗಣಾಚಾರಿ, ಉಪಾಧ್ಯಕ್ಷ ವಿರೇಶ ಚಿಂದಿ, ಡಾ. ಎಸ್. ಎಸ್. ಕಳಸಾ ಇದ್ದರು.
Published on

ಗುಳೇದಗುಡ್ಡ: ವಿದ್ಯಾರ್ಥಿಗಳು ಓದಿನೊಂದಿಗೆ ಕ್ರೀಡೆಗಳಲ್ಲಿ ಪಾಲ್ಗೊಳ್ಳುವುದರಿಂದ ದೇಹ ಸದೃಢವಾಗುತ್ತದೆ ಎಂದು ನಿವೃತ್ತ ಪ್ರಾಚಾರ್ಯ ಬಸವರಾಜ ಎಸ್. ಕುಬಕಡ್ಡಿ ಹೇಳಿದರು.

ಎಸ್. ಆರ್. ಶೆಟ್ಟರ್ ಸ್ವತಂತ್ರ ಪಪೂ ಕಾಲೇಜಿನ ಕ್ರೀಡಾ ಮತ್ತು ಸಾಂಸ್ಕೃತಿಕ ಚಟುವಟಿಕೆ ಉದ್ಘಾಟನೆ ಹಾಗೂ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಸ್ವಾಗತ ಸಮಾರಂಭದಲ್ಲಿ ಅವರು ಮಾತನಾಡಿದರು.

ವಿದ್ಯಾರ್ಥಿಗಳು ಆರೋಗ್ಯವಂತರಾಗಿ ಸದೃಢ ಮನಸ್ಸು ಹೊಂದಬೇಕು. ವಿದ್ಯಾರ್ಥಿಗಳು ಪಠ್ಯೇತರ ಚಟುವಟಿಕೆಯಲ್ಲೂ ಭಾಗವಹಿಸಿ ತಮ್ಮಲ್ಲಿನ ಪ್ರತಿಭೆ ಹೊರಹಾಕಬೇಕು ಎಂದರು.

ಸಂಸ್ಥೆ ಸಂಸ್ಥಾಪಕ ಅಧ್ಯಕ್ಷ ಹೊಳಬಸು ಶೆಟ್ಟರ್ ಕಾರ್ಯಕ್ರಮ ಉದ್ಘಾಟಿಸಿದರು. ಸಂಸ್ಥೆ ಅಧ್ಯಕ್ಷ ಮಹಾಂತಯ್ಯ ಸರಗಣಾಚಾರಿ, ಉಪಾಧ್ಯಕ್ಷ ವಿರೇಶ ಚಿಂದಿ ಮಾತನಾಡಿದರು.

ಡಾ. ಎಸ್. ಎಸ್. ಕಳಸಾ, ಸಂಸ್ಥೆ ಆಡಳಿತ ಮಂಡಳಿ ಸದಸ್ಯರು, ವಿದ್ಯಾರ್ಥಿಗಳು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net