ಗ್ರಾಪಂ ನೌಕರರ ಧರಣೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಿ

ರೇವಣಸಿದ್ದಪ್ಪ ಪಾಟೀಲ್
Published on

ಚಿಂಚೋಳಿ: ಗ್ರಾಮ ಪಂಚಾಯಿತಿ ನೌಕರರಿಗೆ ಕನಿಷ್ಠ 31 ಸಾವಿರ ರೂ. ವೇತನ ಜಾರಿಗೊಳಿಸಬೇಕು, ಪ್ರತಿ ಗ್ರಾಪಂಗೆ ಲೆಕ್ಕ ಸಹಾಯಕ ಹುದ್ದೆ ಸೃಷ್ಟಿಸಬೇಕು ಎಂಬುದು ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮಂಗಳವಾರ ಬೆಂಗಳೂರು ಚಲೋ ಚಳವಳಿ ಹಮ್ಮಿಕೊಂಡಿದ್ದು, ನೌಕರರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘದ ತಾಲೂಕು ಕಾರ್ಯದರ್ಶಿ ರೇವಣಸಿದ್ದಪ್ಪ ಪಾಟೀಲ್ ಕೋರಿದರು.

ಬೆಂಗಳೂರಿನ ಫ್ರೀಡ್‌ಂ ಪಾರ್ಕ್ ಬಳಿ ಬೃಹತ್ ಹೋರಾಟ ಹಮ್ಮಿಕೊಳ್ಳಲಾಗುತ್ತಿದ್ದು, ರಾಜ್ಯದ ವಿವಿಧ ಭಾಗಗಳಿಂದ ನೌಕರರು ಪಾಲ್ಗೊಳ್ಳಲಿದ್ದಾರೆ. ಹೀಗಾಗಿ ತಾಲೂಕಿನಿಂದ ಎಲ್ಲ ಗ್ರಾಪಂಗಳ ನೌಕರರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಹೋರಾಟ ಯಶಸ್ವಿಗೊಳಿಸಬೇಕು ಎಂದು ಭಾನುವಾರ ಸುದ್ದಿಗೋಷ್ಠಿಯಲ್ಲಿ ಮನವಿ ಮಾಡಿದರು.

ಪ್ರಮುಖರಾದ ಮಹಿಬೂಬ್ ಅಲಿ, ಜಗನ್ನಾಥ ಶಿರೋಳ್ಳಿ, ಶಾಮರಾವ ಪೋಲಕಪಳ್ಳಿ, ಸಂಗಮೇಶ ವೆಂಕಟಾಪುರ, ಸಂಜು ಕುಂಚಾವರA, ಭಾಗಪ್ಪ, ರಾಜಕುಮಾರ ಐನಾಪುರ, ತುಕರಾಮ ಬಸಂತಪುರ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net