ಪಠ್ಯೇತರ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವಿಕೆ ಮುಖ್ಯ

snd pu sports
ಸಿಂಧನೂರಿನ ತಾಲೂಕು ಕ್ರೀಡಾಂಗಣದಲ್ಲಿ ಭಾನುವಾರ ಆಯೋಜಿಸಿದ್ದ ಪದವಿಪೂರ್ವ ಕಾಲೇಜುಗಳ ಜಿಲ್ಲಾ ಮಟ್ಟದ ಕ್ರೀಡಾಕೂಟವನ್ನು ಶಾಸಕ ಹಂಪನಗೌಡ ಬಾದರ್ಲಿ ಉದ್ಘಾಟಿಸಿದರು. ಎಂಎಲ್ಸಿ ಬಸನಗೌಡ ಬಾದರ್ಲಿ, ಪ್ರಭಾರ ಡಿಡಿಪಿಯು ಸೋಮಶೇಖರಪ್ಪ ಹೊಕ್ರಾಣಿ, ಡಿಡಿಪಿಐ ಕೊಟ್ರಬಸಪ್ಪ ಕೆ., ಪ್ರಮುಖರಾದ ಡಾ.ಕೆ.ಸುಬ್ಬಾರಾವ್. ಡಾ.ಶ್ರೀನಿವಾಸ ಚಿಟ್ಟೂರಿ ಇತರರಿದ್ದರು.
Published on

ಸಿಂಧನೂರು: ಆರೋಗ್ಯಯುತ ಪರಿಪೂರ್ಣ ವ್ಯಕ್ತಿತ್ವ ಹೊಂದಲು ವಿದ್ಯಾರ್ಥಿಗಳು ಪಠ್ಯೇತರ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವ ಅಗತ್ಯವಿದೆ ಎಂದು ಶಾಸಕ ಹಂಪನಗೌಡ ಬಾದರ್ಲಿ ಹೇಳಿದರು.

ನಗರದ ತಾಲೂಕು ಕ್ರೀಡಾಂಗಣದಲ್ಲಿ ಭಾನುವಾರ ಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ), ಡಾಫಡಿಲ್ ಪಿಯು ಕಾಲೇಜ್ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಪದವಿಪೂರ್ವ ಕಾಲೇಜುಗಳ ಜಿಲ್ಲಾ ಮಟ್ಟದ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದರು. ಪ್ರಸ್ತುತ ಆರೋಗ್ಯ ಕಾಪಾಡಿಕೊಳ್ಳುವುದು ಸವಾಲಿನ ಕೆಲಸವಾಗಿದೆ. ಇಂಥ ಸಂದರ್ಭದಲ್ಲಿ ಉತ್ತಮ ಆಹಾರ, ಗಾಳಿ, ನೀರು ಜತೆಗೆ ಕ್ರೀಡಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವಿಕೆ ಮುಖ್ಯವಾಗಿದೆ. ಕ್ರೀಡಾ ಪ್ರತಿಭೆಗಳಿಗೆ ಪ್ರೋತ್ಸಾಹಿಸುವ ಕೆಲಸವಾಗಬೇಕು ಎಂದರು.

ರಾಜ್ಯ ಸರ್ಕಾರ ಕೂಡ ಶಿಕ್ಷಣ ಮಟ್ಟ ಸುಧಾರಣೆ ನಿಟ್ಟಿನಲ್ಲಿ ಜಿಲ್ಲೆಯ 16 ಶಾಲೆಗಳನ್ನು ಮೇಲ್ದರ್ಜೇಗೇರಿಸಿ, 1 ರಿಂದ 12 ತರಗತಿವರೆಗೆ ವಿದ್ಯಾರ್ಥಿಗಳು ಗುಣಮಟ್ಟದ ಶಿಕ್ಷಣ ಪಡೆಯಲು ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಘೋಷಣೆ ಮಾಡಿದೆ.ಈ ಶಾಲೆಗಳು ಅಗತ್ಯ ಸೌಲಭ್ಯಗಳ ಜತೆಗೆ ಮೌಲ್ಯಯುತ ಶಿಕ್ಷಣ ಒದಗಿಸುವ ನಿಟ್ಟಿನಲ್ಲಿ ಕೆಲಸ ಮಾಡಲಿವೆ ಎಂದು ತಿಳಿಸಿದರು.

ಪ್ರಭಾರ ಡಿಡಿಪಿಯು ಸೋಮಶೇಖರಪ್ಪ ಹೊಕ್ರಾಣಿ ಮಾತನಾಡಿ, ಈಗಾಗಲೇ ಜಿಲ್ಲೆಯ 7 ತಾಲೂಕುಗಳಲ್ಲಿ ಯಶಸ್ವಿಯಾಗಿ ತಾಲೂಕು ಮಟ್ಟದ ಕ್ರೀಡಾಕೂಟಗಳನ್ನು ಮುಗಿಸಿದ್ದೇವೆ. ಈಗ ಜಿಲ್ಲಾ ಮಟ್ಟದ ಪದವಿಪೂರ್ವ ಕಾಲೇಜುಗಳ ಕ್ರೀಡಾಕೂಟ ಸಿಂಧನೂರಿನಲ್ಲಿ ಆಯೋಜಿಸಲಾಗಿದೆ ಎಂದು ತಿಳಿಸಿದರು. ಎಂಎಲ್ಸಿ ಬಸನಗೌಡ ಬಾದರ್ಲಿ, ಡಿಡಿಪಿಐ ಕೊಟ್ರಬಸಪ್ಪ ಕೆ. ಮಾತನಾಡಿದರು. ಡಾ.ಕೆ.ಸುಬ್ಬಾರಾವ್, ಡಾ.ಶ್ರೀನಿವಾಸ ಚಿಟ್ಟೂರಿ, ಉದ್ಯಮಿ ಶಂಬಣ್ಣ ಸಾಹುಕಾರ ಕೆ.ಹಂಚಿನಾಳ, ಮಣಿಮಾರನ್, ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ವಿಠ್ಠಲ ಎಂ., ಕ್ರೀಡಾ ಸಂಯೋಜಕ ಅಮರೇಶ, ಡಾಫಡಿಲ್ಸ್ ಪಿಯು ಕಾಲೇಜ್ ಅಧ್ಯಕ್ಷ ಲಕ್ಷ್ಮೀನಾರಾಯಣ ನಂದಿಗಂ ಇದ್ದರು. ಉಪನ್ಯಾಸಕ ನಾಗರಾಜ ಮುಕ್ಕುಂದ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net