ಪಕ್ಷದ ಅಭಿವೃದ್ಧಿ ಕಾರ್ಯ ಮನವರಿಕೆ ಮಾಡಿ

4ckd2-Web
ಚಿಕ್ಕೋಡಿಯಲ್ಲಿ ಹಮ್ಮಿಕೊಂಡಿದ್ದ ಮಹಿಳಾ ಮೋರ್ಚಾ ನೂತನ ಪದಾಧಿಕಾರಿಗಳ ಸಭೆಯನ್ನು ಸಚಿವೆ ಶಶಿಕಲಾ ಡೊಳ್ಳು ಬಾರಿಸುವ ಮೂಲಕ ಉದ್ಘಾಟಿಸಿದರು. ಚನ್ನಮ್ಮ ಪಾಟೀಲ, ಶಿಲ್ಪಾ ಸುವರ್ಣ, ಪ್ರೇಮಾ ಭಂಡಾರಿ ಇತರರು ಇದ್ದರು.
Published on

ಚಿಕ್ಕೋಡಿ: ಸ್ತ್ರೀಯರಿಗೆ ರಾಜಕೀಯದಲ್ಲಿ ಉನ್ನತ ಸ್ಥಾನಮಾನ ನೀಡಿದ ಏಕೈಕ ಪಕ್ಷ ಬಿಜೆಪಿ. ಮಹಿಳಾ ಕಾರ್ಯಕರ್ತೆಯರು ಸಹ ಪಕ್ಷ ಸಂಘಟನೆಯಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಹೇಳಿದ್ದಾರೆ.

ಪಟ್ಟಣದ ಕೇಶವ ಕಲಾ ಭವನದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಚಿಕ್ಕೋಡಿ ಜಿಲ್ಲಾ ಮಹಿಳಾ ಮೋರ್ಚಾ ನೂತನ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದರು. ಬಿಜೆಪಿ ರಾಜ್ಯ ಮಹಿಳಾ ಮೋರ್ಚಾ ಅಧ್ಯಕ್ಷೆ ಗೀತಾ ವಿವೇಕಾನಂದ ಮಾತನಾಡಿ, ಗ್ರಾಪಂ ಚುನಾವಣೆಯನ್ನು ಸಮರ್ಥವಾಗಿ ಎದುರಿಸಲು ಈ ಸಭೆ ಆಯೋಜಿಸಲಾಗಿದೆ. ಪಕ್ಷದ ಕಾರ್ಯಕರ್ತೆಯರು ಪಕ್ಷದ ಸಾಧನೆ ಹಾಗೂ ಅಭಿವೃದ್ಧಿ ಪರ ಕಾರ್ಯಗಳನ್ನು ಜನರಿಗೆ ಮನವರಿಗೆ ಮಾಡಿ ಪಕ್ಷದ ಗೆಲುವಿಗೆ ಸಹಕರಿಸಬೇಕು ಎಂದು ಕೋರಿದರು. ಚಿಕ್ಕೋಡಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಶಾಂಭವಿ ಅಶ್ವತಪುರ, ಚನ್ನಮ್ಮ ಪಾಟೀಲ, ಶಿಲ್ಪಾ ಸುವರ್ಣ, ಪ್ರೇಮಾ ಭಂಡಾರಿ, ವೀಣಾ ಕವಟಗಿಮಠ, ಗೀತಾ ಭಾತೆ, ಶಕುಂತಲಾ ದೋನವಾಡೆ, ಸತೀಶ ಅಪ್ಪಾಜಿಗೋಳ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net