ಕೋಳೂರು ಪಾರ್ವತಮ್ಮ ನಿಧನ

Published on

ಬಳ್ಳಾರಿ : ಜಿಲ್ಲೆಯ ಗಣಿ ಉದ್ಯಮಿ ಕೆ.ಎಂ. ಪಾರ್ವತಮ್ಮ (86) ಬುಧವಾರ ಹೃದಯಾಘಾತದಿಂದ ಬೆಂಗಳೂರಿನ ನಿವಾಸದಲ್ಲಿ ನಿಧನ ಹೊಂದಿದರು. ಇವರಿಗೆ ಇಬ್ಬರು ಪುತ್ರಿಯರು, ಪುತ್ರ ಇದ್ದಾರೆ. ಪಾರ್ವತಿನಗರದ ನಿವಾಸದಲ್ಲಿ ಸಾರ್ವಜನಿಕರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ. ಕುರುಗೋಡು ತಾಲೂಕಿನ ಕೋಳೂರು ಗ್ರಾಮದಲ್ಲಿ ಗುರುವಾರ ಅಂತ್ಯಕ್ರಿಯೆ ನಡೆಯಲಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net