

ಪುತ್ತೂರು ಗ್ರಾವಾಂತರ: ಒಳಮೊಗ್ರು ಗ್ರಾಮದ ಕುಂಬ್ರದಲ್ಲಿ ವಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ಸಂಜೆ ಎರಡು ಕಾರುಗಳು ಡಿಕ್ಕಿಯಾಗಿವೆ. ಡಿಕ್ಕಿಯ ರಭಸಕ್ಕೆ ಕಾರೊಂದು ಪಲ್ಟಿಯಾಗಿ ರಸ್ತೆ ಬದಿಗೆ ಬಿದ್ದಿದೆ. ಸುಳ್ಯ ಕಡೆಯಿಂದ ಪುತ್ತೂರು ಕಡೆಗೆ ಬರುತ್ತಿದ್ದ ಕಾರಿಗೆ ಪುತ್ತೂರು ಕಡೆಯಿಂದ ಮಡಿಕೇರಿ ಕಡೆಗೆ ತೆರಳುತ್ತಿದ್ದ ಕಾರು ಓವರ್‌ಟೇಕ್ ವಾಡುವ ಭರದಲ್ಲಿ ಡಿಕ್ಕಿ ಹೊಡೆದಿದ್ದು, ಈ ವೇಳೆ ಚಾಲಕನ ಹತೋಟಿ ಕಳೆದುಕೊಂಡ ಕಾರು ಪಲ್ಟಿಯಾಗಿ ರಸ್ತೆ ಬದಿಗೆ ಬಿದ್ದಿರುವುದಾಗಿ ಸ್ಥಳೀಯರು ವಾಹಿತಿ ನೀಡಿದ್ದಾರೆ. ಕಾರಿನಲ್ಲಿದ್ದವರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಸಂಪ್ಯ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.