

ಮಂಗಳೂರು : ಮಂಗಳೂರು ಕ್ರೈಸ್ತ ಧರ್ಮ ಪ್ರಾಂತ್ಯದ ಪಾಲನಾ ಪರಿಷತ್ತಿನ ಸುವರ್ಣ ಮಹೋತ್ಸವ ಡಿ.10ರಂದು ನಗರದ ಕಂಕನಾಡಿ ಫಾದರ್ ಮುಲ್ಲರ್ ಕನ್ವೆನ್ಶನ್ ಸೆಂಟರ್‌ನಲ್ಲಿ ನಡೆಯಲಿದೆ. ಗೋವಾದ ಮತ್ತು ದಾಮನ್ ಕಾರ್ಡಿನಲ್ ಫಿಲಿಪ್ ನೆರಿ ಫೆರಾವೊ ಹಾಗೂ ಬೆಂಗಳೂರಿನ ಆರ್ಚ್ ಬಿಷಪ್ ಫಾ.ಡಾ. ಪೀಟರ್ ಮಚಾದೊ, ಮುಖ್ಯ ಅತಿಥಿಗಳಾಗಿ ಭಾಗವಹಿಸಲಿರುವರು.
ಮಂಗಳೂರು ಕ್ರೈಸ್ತ ಧರ್ಮ ಪ್ರಾಂತ್ಯದ ನಿವೃತ್ತ ಬಿಷಪ್ ಡಾ. ಅಲೋಶಿಯಸ್ ಪೌಲ್ ಡಿಸೋಜಾ, ನಿವೃತ್ತ ನ್ಯಾಯಮೂರ್ತಿ ಜಸ್ಟಿಸ್ ಜಾನ್ ಮೈಕೆಲ್ ಡಿಕುನ್ಹಾ, ಅನಿವಾಸಿ ಭಾರತೀಯ ಉದ್ಯಮಿ ರೊನಾಲ್ಡ್ ಕುಲಾಸೊ , ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಮಾಜಿ ನಿರ್ದೇಶಕಿ ಫಿಲೋಮಿನಾ ಲೋಬೊ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಂಗಳೂರು ಬಿಷಪ್ ಡಾ. ಪೀಟರ್ ಪಾವ್ಲ್ ಸಲ್ಡಾನಾ ವಹಿಸಲಿದ್ದಾರೆ.