ಆಸ್ಪತ್ರೆಯಲ್ಲಿ ಕುಸಿದು ಬಿದ್ದು ರೋಗಿ ಸಾವು

ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Published on
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಸರ್ಕಾರಿ ಆಸ್ಪತ್ರೆಯ ನಿರ್ಲಕ್ಷ್ಯದಿಂದ ರೋಗಿಯೊಬ್ಬರು ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಆಸ್ಪತ್ರೆಗೆ ಬೆಳ್ತಂಗಡಿ ತಾಲೂಕಿನ ಪುದುವೆಟ್ಟು ಗ್ರಾಮದ ಪೆಲತ್ತಾಜೆ ನಿವಾಸಿ ಅಚ್ಯುತ(42) ಎಂಬುವರು ಹೊಟ್ಟೆನೋವು ಚಿಕಿತ್ಸೆಗಾಗಿ ಮೇ 10ರಂದು ಮಧ್ಯಾಹ್ನ ದಾಖಲಾಗಿದ್ದರು. ಮೇ 11ರಂದು ಬೆಳಗ್ಗೆ 5 ಗಂಟೆಗೆ ಸುಮಾರಿಗೆ ಆಸ್ಪತ್ರೆಯಿಂದ ಯಾರಿಗೂ ಹೇಳದೆ ಹೊರಗಡೆ ಹೋಗುವಾಗ ಹಿಂಭಾಗದ ಡಯಾಲಿಸಿಸ್ ಕೇಂದ್ರದ ಬಳಿ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ.
ಈ ಘಟನೆ ಆಸ್ಪತ್ರೆಯ ವೈದ್ಯರ ನಿರ್ಲಕ್ಷ್ಯ ಎದ್ದು ಕಾಣುತ್ತಿದೆ. ಡಿ ಗ್ರೂಪ್ ನೌಕರರು ಸರಿಯಾಗಿ ಕರ್ತವ್ಯ ನಿರ್ವಹಿಸದೆ ಚಿಕಿತ್ಸೆಯಲ್ಲಿದ್ದ ರೋಗಿಯೊಬ್ಬರು ಹೊರ ಹೋಗುವಂತೆ ಮಾಡಿ ಸಾವಿಗೆ ಕಾರಣ ಎಂದು ಸಾರ್ವಜನಿಕರು ಆರೋಪ ಮಾಡುತ್ತಿದ್ದಾರೆ. ಮೃತ ವ್ಯಕ್ತಿಯ ಕುಟುಂಬ ಬಡತನದಲ್ಲಿದ್ದು ಪತ್ನಿ ಕೂಲಿ ಕೆಲಸ ಮಾಡುತ್ತಿದ್ದು ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net