ಪಟ್ಲ ಸಂಭ್ರಮದಿಂದ ಹಬ್ಬದ ವಾತಾವರಣ ಸೃಷ್ಟಿ -ಪಟ್ಲ ಸತೀಶ್ ಶೆಟ್ಟಿ

mng-17may-patla
Published on


ಮಂಗಳೂರು : ಯಕ್ಷಧ್ರುವ ಪಟ್ಲ ಫೌಂಡೇಶನ್ ವತಿಯಿಂದ ನಗರದ ಅಡ್ಯಾರ್ ಗಾರ್ಡನ್‌ನಲ್ಲಿ ಮೇ 26ರಂದು ನಡೆಯಲಿರುವ ಪಟ್ಲ ಸಂಭ್ರಮ ಕಾರ್ಯಕ್ರಮದ ಪೂರ್ವಭಾವಿ ಸಭೆ ಪತ್ತುಮುಡಿ ಸೌಧದಲ್ಲಿ ನಡೆಯಿತು.
ಸಭೆಯ ಅಧ್ಯಕ್ಷತೆ ವಹಿಸಿದ್ದ ಟ್ರಸ್ಟ್‌ನ ಅಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ ಮಾತನಾಡಿ ‘ ಪಟ್ಲ ಸಂಭ್ರಮ ಕಲಾವಿದರಿಗೆ ಕಲಾಪೋಷಕರಿಗೆ ಹಬ್ಬದ ವಾತಾವರಣ ಸೃಷ್ಟಿಸಿದೆ. ಕಾರ್ಯಕ್ರಮ ಯಶಸ್ವಿಗೊಳಿಸಲು ಪಟ್ಲ ಫೌಂಡೇಶನ್‌ನ ಎಲ್ಲ ಘಟಕದ ಪದಾಧಿಕಾರಿಗಳು ಸಹಕರಿಸಬೇಕು ಎಂದರು.
2024 ರ ಸಾಲಿನ ಯಕ್ಷಧ್ರುವ ಪಟ್ಲ ಪ್ರಶಸ್ತಿಯನ್ನು ಬಡಗುತಿಟ್ಟಿನ ಕಲಾವಿದ ರಾಮಚಂದ್ರ ಹೆಗಡೆ ಕೊಂಡದಕುಳಿ ಪಡೆಯಲಿದ್ದಾರೆ. ಚಿತ್ರ ನಟ ಕಿಚ್ಚ ಸುದೀಪ್ ಭಾಗವಹಿಸುವುದು ಕಾರ್ಯಕ್ರಮದ ಮೆರುಗು ಹೆಚ್ಚಿಸಲಿದೆ ಎಂದು ಅವರು ಹೇಳಿದರು.
ಹಿರಿಯ ಅರ್ಥದಾರಿ ಪ್ರಭಾಕರ ಜೋಷಿ ಸಲಹೆ ಸೂಚನೆ ನೀಡಿದರು. ಭುಜಬಲಿ ಧರ್ಮಸ್ಥಳ, ಸರಪಾಡಿ ಅಶೋಕ್ ಶೆಟ್ಟಿ, ಚಂದ್ರಹಾಸ ಶೆಟ್ಟಿ ರಂಗೋಲಿ, ಟಿ.ಬಿ. ರಾಜಾರಾಂ ಭಟ್, ಪೂರ್ಣಿಮಾ ಯತೀಶ್ ರೈ ಅನಿಸಿಕೆಗಳನ್ನು ವ್ಯಕ್ತಪಡಿಸಿದರು. ಸಂಘಟನಾ ಕಾರ್ಯದರ್ಶಿ ಕದ್ರಿ ನವನೀತ ಶೆಟ್ಟಿ ಕಾರ್ಯಕ್ರಮದ ಸ್ವರೂಪ ವಿವರಿಸಿದರು.
ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ಕೆ ಭಂಡಾರಿ ಅಡ್ಯಾರ್, ಕೋಶಾಧಿಕಾರಿ ಸಿಎ ಸುದೇಶ್ ಕುಮಾರ್ ರೈ,
ಉಪಾಧ್ಯಕ್ಷ ಮನು ರಾವ್, ಸಂಘಟನಾ ಕಾರ್ಯದರ್ಶಿ ಬಾಳ ಜಗನ್ನಾಥ ಶೆಟ್ಟಿ, ರಾಜೀವ ಪೂಜಾರಿ ಕೈಕಂಬ, ಉದಯಕುಮಾರ್ ಶೆಟ್ಟಿ ಉಪಸ್ಥಿತರಿದ್ದರು. ಜತೆ ಕಾರ್ಯದರ್ಶಿ ರವಿಚಂದ್ರ ಶೆಟ್ಟಿ ಅಶೋಕನಗರ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net