

ಬಂಟ್ವಾಳ: ಯಕ್ಷಧ್ರುವ ಪಟ್ಲ ಫೌಂಡೇಷನ್‌ನ ಬಂಟ್ವಾಳ ತಾಲೂಕು ಘಟಕದ ಸಭೆ ಘಟಕದ ಅಧ್ಯಕ್ಷ ಚಂದ್ರಹಾಸ ಡಿ. ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಬಿ.ಸಿ.ರೋಡಿನಲ್ಲಿ ಶನಿವಾರ ನಡೆಯಿತು.
ಮೇ 7ರಂದು ಬಿ.ಸಿ ರೋಡಿನ ಅನ್ನಫೂರ್ಣೇಶ್ವರಿ ದೇವಳದಲ್ಲಿ ನಡೆಯಲಿರುವ ಬಂಟ್ವಾಳ ಘಟಕದ ಪ್ರಥಮ ವಾರ್ಷಿಕೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಲಾಯಿತು. ವಕೀಲ ಪ್ರಸಾದ್‌ಕುಮಾರ್ ರೈ, ಯಕ್ಷಗಾನ ಕಲಾವಿದ ಅಶೋಕ್ ಶೆಟ್ಟಿ ಸರಪಾಡಿ, ಪತ್ರಕರ್ತ ರತ್ನದೇವ್ ಪುಂಜಾಲಕಟ್ಟೆ, ಕಲಾವಿದ ನಾರಾಯಣ ಸಿ.ಪೆರ್ನೆ ಅನಿಸಿಕೆ ವ್ಯಕ್ತಪಡಿಸಿದರು.
ಘಟಕದ ಉಪಾಧ್ಯಕ್ಷ ಭುಜಂಗ ಸಾಲಿಯಾನ್ ಬಿ.ಸಿ.ರೋಡು, ಜಯಪ್ರಕಾಶ್ ಜಕ್ರಿಬೆಟ್ಟು, ಕೋಶಾಧಿಕಾರಿ ಶಂಕರ ಶೆಟ್ಟಿ ಪರಾರಿಗುತ್ತು ಉಪಸ್ಥಿತರಿದ್ದರು. ಗೌರವಾಧ್ಯಕ್ಷ ಜಗನ್ನಾಥ ಚೌಟ ಬದಿಗುಡ್ಡೆ ಸ್ವಾಗತಿಸಿ ಪ್ರಸ್ತಾವನೆಗೈದರು. ಉಪಾಧ್ಯಕ್ಷ ಚಿತ್ತರಂಜನ್ ಶೆಟ್ಟಿ ಬೊಂಡಾಲ ವಂದಿಸಿದರು. ಪ್ರಧಾನ ಕಾರ್ಯದರ್ಶಿ ದೇವದಾಸ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.