

ಮದ್ದೂರು: ಪಟ್ಟಣದ ಶಿವಪುರದ ಧ್ವಜ ಸತ್ಯಾಗ್ರಹ ಸೌಧದ ಆವರಣದಲ್ಲಿ ಡಿ.ಸಿ. ತಮ್ಮಣ್ಣ ಸೇವಾ ಪ್ರತಿಷ್ಠಾನದ ವತಿಯಿಂದ ಸೋಮವಾರ ಭಾರತ ಬಿಟ್ಟು ತೊಲಗಿ ಚಳವಳಿಯ 80ನೇ ವರ್ಷಾಚರಣೆ ಪ್ರಯುಕ್ತ ಕಿರುನಾಟಕ ಮತ್ತು ದೇಶಭಕ್ತಿ ಗೀತೆಗಳ ಸ್ಪರ್ಧೆ ನಡೆಯಿತು.
ಪಟ್ಟಣದ ವಿವಿಧ ಶಾಲೆಯ ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಿ ದೇಶ ಪ್ರೇಮ ಮೆರೆಯುವ ಕಿರು ನಾಟಕಗಳನ್ನು ಮಾಡುವ ಮೂಲಕ ಗಮನ ಸೆಳೆದರು.
ಶಾಸಕ ಡಿ.ಸಿ. ತಮ್ಮಣ್ಣ ಮಾತನಾಡಿ, ತಾಲೂಕಿನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ನನಗೂ ಶಿಕ್ಷಣ ಸಂಸ್ಥೆಗಳನ್ನು ತೆರೆಯುವ ಶಕ್ತಿಯಿದ್ದರೂ ಅದನ್ನು ಬಿಟ್ಟು ಸರ್ಕಾರಿ ಶಾಲೆ ಕಾಲೇಜುಗಳನ್ನು ಬಲಗೊಳಿಸುವ ಕೆಲಸ ಮಾಡಿದ್ದೇನೆ. ಗ್ರಾಮೀಣ ಭಾಗದಲ್ಲಿ ಶಾಲೆಗಳನ್ನು ತೆರೆಯುವುದರ ಮೂಲಕ ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಿದ್ದೇನೆ ಎಂದರು.
ಕಿರು ನಾಟಕ ಸ್ಪರ್ಧೆಯಲ್ಲಿ ಶಿವಪುರದ ಪೂರ್ಣ ಪ್ರಜ್ಞಾ ಕಾನ್ವೆಂಟ್ (ಪ್ರ), ಪಟ್ಟಣದ ಶಾಂತ ಮರಿಯಪ್ಪ (ದ್ವಿ)ಹಾಗೂ ಭಾರತೀ ನಗರದ ಸರ್ಕಾರಿ ಪ್ರೌಢಶಾಲೆ (ತೃ) ಬಹುಮಾನ ಪಡೆದುಕೊಂಡವು. ಡಿ.ಸಿ. ತಮ್ಮಣ್ಣ ಸೇವಾ ಪ್ರತಿಷ್ಠಾನದ ಅಧ್ಯಕ್ಷೆ ಡಾ.ಸೌಮ್ಯಾ ರಮೇಶ್, ಚಾಂಪಿಯನ್ಸ್ ಗ್ರೂಪ್ ಆಡಳಿತ ನಿರ್ದೇಶಕಿ ಹೇಮಾಮಾಲಿನಿ, ಎಂ.ಎಚ್.ಚನ್ನೇಗೌಡ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಸಿ.ಅಪೂರ್ವಚಂದ್ರ, ತಹಸೀಲ್ದಾರ್ ನರಸಿಂಹಮೂರ್ತಿ, ಬಿಒಇ ಮಹದೇವು, ಪುರಸಭಾ ಅಧ್ಯಕ್ಷ ಸುರೇಶ್‌ಕುಮಾರ್, ಸ್ಥಾಯಿ ಸಮಿತಿ ಅಧ್ಯಕ್ಷ ಎಸ್.ಮಹೇಶ್, ಉಪಾಧ್ಯಕ್ಷೆ ಸುಮಿತ್ರಾ ರಮೇಶ್, ಸದಸ್ಯರಾದ ಬಸವರಾಜು, ನಂದೀಶ್, ಲತಾ, ಪೂರ್ಣಪ್ರಜ್ಞಾ ಕಾನ್ವೆಂಟ್ ಕಾರ್ಯದರ್ಶಿ ಅನಂತೇಗೌಡ, ತೀರ್ಪುಗಾರರಾದ ತೊರೆಚಾಕನಹಳ್ಳಿ ಶಂಕರೇಗೌಡ, ಹೆಮ್ಮನಹಳ್ಳಿ ಪುಟ್ಟಸ್ವಾಮಿ, ಗೊಲ್ಲರದೊಡ್ಡಿ ಶಿವಲಿಂಗಯ್ಯ ಇದ್ದರು.