

ಹಾಸನ: ದೇಶಪ್ರೇಮ ಮತ್ತು ರಾಷ್ಟ್ರೀಯ ಭಾವೈಕ್ಯತೆ ಎಂಬುದು ಆಗಸ್ಟ್ ತಿಂಗಳಿಗೆ ಮಾತ್ರ ಸೀಮಿತವಾಗದೆ ನಿತ್ಯ ನಿರಂತರವಾಗಿರಬೇಕು ಎಂದು ನಿವೃತ್ತ ಕ್ಷೇತ್ರ ಶಿಕ್ಷಣಾಧಿಕಾರಿ ಜೆ.ಬಿ.ತಮ್ಮಣ್ಣಗೌಡ ಹೇಳಿದರು.
ಕಂದಲಿ ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಸ್ವಾತಂತ್ರೃ ದಿನಾಚರಣೆ ಸಮಾರಂಭದಲ್ಲಿ ಮಾತನಾಡಿದ ಅವರು, ನಾವು ಭಾರತೀಯರು. ನಾವೆಲ್ಲರೂ ಒಂದೇ ಎಂಬ ಭಾವನೆಯ ಮೂಲಕ ದೇಶಾಭಿಮಾನ ಮೂಡಿಸುವ ಕೆಲಸವಾಗಬೇಕು ಎಂದರು.
ವಿದ್ಯಾರ್ಥಿಗಳು ಕಲಿಕೆಯ ಮತ್ತು ಜ್ಞಾನದ ಆಧಾರದ ಮೇಲೆ ಭವಿಷ್ಯವನ್ನು ತಾವೇ ರೂಪಿಸಿಕೊಳ್ಳಬೇಕಿದೆ. ಹಾಗಾಗಿ ಕಲಿಸುವವರು ಪರಿಣಾಮಕಾರಿಯಾಗಿ ಕಲಿಸಬೇಕು ಹಾಗೆಯೇ ಕಲಿಯುವವರು ಪರಿಣಾಮಕಾರಿಯಾಗಿ ಕಲಿಯಬೇಕು. ಇಷ್ಟಪಟ್ಟು ಕಲಿಸುವವರು ಇರುವಾಗ ಇಷ್ಟಪಟ್ಟು ಕಲಿಯುವವರೂ ಇರಬೇಕು ಎಂದರು.
ವಸತಿ ಶಾಲೆಗಳ ನೌಕರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಸಿ.ಎನ್.ಉಷಾ, ಹಳೆಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಎಂ.ಎಚ್. ಯೋಗೇಶ್, ಕಾರ್ಯದರ್ಶಿ ಡಿ.ಟಿ.ಗಿರೀಶ್, ಉಪಾಧ್ಯಕ್ಷ ಕೆ.ಎಸ್.ಹರೀಶ್, ಖಜಾಂಚಿ ಕೆ.ಎಲ್.ವಸಂತಗೌಡ, ನಿರ್ದೇಶಕ ಕೆ.ಎಸ್ ದಿನೇಶ್, ನಾಗೇಶ್, ರಾಘವೇಂದ್ರ, ಸುಜಯ್ ಇತರರು ಇದ್ದರು.