ಪಟ್ಟಾ ಜಮೀನಿನಲ್ಲಿ ಅಕ್ರಮ ಗಣಿಗಾರಿಕೆ: ಕೊಟ್ಟೂರು ತಹಸೀಲ್ದಾರ್ ಕುಮಾರಸ್ವಾಮಿ ನೇತೃತ್ವದ ತಂಡ ಪರಿಶೀಲನೆ

Kannanayakana Katte Village Illigal Stone Minig
ಕನ್ನನಾಯಕನಕಟ್ಟೆ ಗ್ರಾಮದಲ್ಲಿ ಅಕ್ರಮ ಗಣಿಗಾರಿಕೆ ನಡೆಯುತ್ತಿದ್ದ ಸ್ಥಳಕ್ಕೆ ತಹಸೀಲ್ದಾರ್ ಕುಮಾರಸ್ವಾಮಿ, ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿ ಕೀರ್ತಿ ಕುಮಾರ್, ಪಿಎಸ್‌ಐ ನಾಗಪ್ಪ, ಕಂದಾಯ ಪರಿವೀಕ್ಷಕ ಹಾಲಸ್ವಾಮಿ ಭೇಟಿ ನೀಡಿ ಪರಿಶೀಲಿಸಿದರು.
Published on

ಕೊಟ್ಟೂರು: ತಾಲೂಕಿನ ಕನ್ನನಾಯಕನಕಟ್ಟೆ ಗ್ರಾಮದ 7.42 ಎಕರೆ ಪಟ್ಟಾ ಜಮೀನಿನಲ್ಲಿ ಅಕ್ರಮವಾಗಿ ಮಣ್ಣು ಮತ್ತು ಕಲ್ಲು ಅಗೆದು ಸಾಗಾಣಿಕೆ ಮಾಡುತ್ತಿರುವುದು ಬೆಳಕಿಗೆ ಬಂದಿದ್ದು, ಮಂಗಳವಾರ ತಹಸೀಲ್ದಾರ್ ಎಂ.ಕುಮಾರಸ್ವಾಮಿ ನೇತೃತ್ವದ ತಂಡ ಸ್ಥಳ ಪರಿಶೀಲಿಸಿತು.

ಸಾರ್ವಜನಿಕರಿಂದ ದೂರು ಬಂದ ಹಿನ್ನೆಲೆಯಲ್ಲಿ ಕೊಟ್ಟೂರು ಪಿಎಸ್‌ಐ ನಾಗಪ್ಪ, ಹೊಸಪೇಟೆಯ ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿ ಕೀರ್ತಿಕುಮಾರ್, ಕಂದಾಯ ನಿರೀಕ್ಷಕರಾದ ಹಾಲಸ್ವಾಮಿಯೊಂದಿಗೆ ತಹಸೀಲ್ದಾರ್ ಸ್ಥಳಕ್ಕೆ ಭೇಟಿ ನೀಡಿದಾಗ ಮಣ್ಣು ಮತ್ತು ಕಲ್ಲು ಅಗೆದಿರುವುದು ಕಂಡುಬಂದಿದೆ. ಲಕ್ಷ್ಮೀದೇವಿ ಹೆಸರಿನಲ್ಲಿರುವ ಜಮೀನಿನಲ್ಲಿ ಅಕ್ರಮ ಗಣಿಗಾರಿಕೆ ನಡೆಯುತ್ತಿತ್ತು. ಈ ಕುರಿತು ಸೂಕ್ತ ಕ್ರಮಕೈಗೊಳ್ಳುವಂತೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗೆ ತಹಸೀಲ್ದಾರ್ ತಿಳಿಸಿದ್ದಾರೆ. ಅಲ್ಲದೆ ತಾಲೂಕಿನಲ್ಲಿ ಅಕ್ರಮವಾಗಿ ಕಲ್ಲು ಮತ್ತು ಮಣ್ಣು ಸಾಗಣೆ, ಡಿಗ್ಗಿಂಗ್ ಮಾಡಲು ಪ್ರಯತ್ನಿಸಿದರೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net