ಮಾದರಹಳ್ಳಿ ಗ್ರಾಪಂ ಅಧ್ಯಕ್ಷರಾಗಿ ಪವಿತ್ರಾ ಆಯ್ಕೆ

7KMD-1
ಮಾದರಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷರಾಗಿ ಆಯ್ಕೆಯಾದ ಪವಿತ್ರಾ ಹಾಗೂ ಶಿವಲಿಂಗಯ್ಯ ಅವರನ್ನು ಅಭಿನಂದಿಸಲಾಯಿತು.
Published on

ಕೆ.ಎಂ.ದೊಡ್ಡಿ: ಸಮೀಪದ ಮಾದರಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಸದಸ್ಯರಾದ ಪವಿತ್ರಾ ಹಾಗೂ ಉಪಾಧ್ಯಕ್ಷರಾಗಿ ಶಿವಲಿಂಗಯ್ಯ ಆಯ್ಕೆಯಾದರು.

ಗ್ರಾಮ ಪಂಚಾಯಿತಿಯಲ್ಲಿ 18 ಸದಸ್ಯರ ಬಲ ಇದ್ದು ಅವರಲ್ಲಿ ಅಧ್ಯಕ್ಷ ಸ್ಥಾನಕ್ಕೆ ಪವಿತ್ರಾ ಮತ್ತು ಮಂಜುಳಾ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಶಿವಲಿಂಗಯ್ಯ ಮತ್ತು ರಕ್ಷಿತ್‌ಕುಮಾರ್ ನಾಮಪತ್ರ ಸಲ್ಲಿಸಿದ್ದರು. ವಿಜೇತರು 10 ಮತಗಳನ್ನು ಪಡೆದರೇ ಪ್ರತಿಸ್ಪರ್ಧಿಗಳು 8 ಮತಗಳನ್ನು ಪಡೆದು ಪರಾಭವಗೊಂಡರು.

ಚುನಾವಣಾಧಿಕಾರಿಯಾಗಿ ಅಕ್ಷರದಾಸೋಹ ಯೋಜನೆ ಸಹಾಯಕ ನಿರ್ದೇಶಕಿ ರಾಜೇಶ್ವರಿ ಕಾರ್ಯನಿರ್ವಹಿಸಿದರು. ಗ್ರಾ.ಪಂ.ಮಾಜಿ ಅಧ್ಯಕ್ಷ ಎಂ.ಇ. ಕೃಷ್ಣ, ನೂತನ ಅಧ್ಯಕ್ಷ ಉಪಾಧ್ಯಕ್ಷರನ್ನು ಅಭಿನಂದಿಸಿದರು.

ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಓದುಲಿಂಗೇಗೌಡ, ಸದಸ್ಯರಾದ ಎಂ.ಇ. ಕೃಷ್ಣ, ಚನ್ನೇಗೌಡ, ಮಹೇಶ್, ಗೀತಾ, ರೇಣುಕಾ, ಸುಧಾ, ಲಕ್ಷ್ಮೀದೇವಮ್ಮ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net