ಪವನ ಇಂಗ್ಲಿಷ್ ಮೀಡಿಯಂ ಶಾಲೆಗೆ 36ರ ಸಂಭ್ರಮ

29 Dwd 3 Ratna Patil
Published on

ವಿಜಯವಾಣಿ ಸುದ್ದಿಜಾಲ ಧಾರವಾಡ

ನಗರದ ಪವನ ಇಂಗ್ಲಿಷ್ ಮೀಡಿಯಂ ಶಾಲೆ 36ರ ಸಂಭ್ರಮದಲ್ಲಿದೆ. ಪಠ್ಯ, ಪಠ್ಯೇತರ ಚಟುವಟಿಕೆಯಲ್ಲಿ ರಾಜ್ಯ, ರಾಷ್ಟç ಮಟ್ಟದಲ್ಲಿ ಸಾಧನೆ ಮಾಡಿದ 100 ವಿದ್ಯಾರ್ಥಿಗಳಿಗೆ 2025- 26ನೇ ಸಾಲಿನ ಪ್ರವೇಶಾತಿಯಲ್ಲಿ ವಿನಾಯಿತಿ ನೀಡಲಾಗುವುದು ಎಂದು ಸಂಸ್ಥೆಯ ಉಪಾಧ್ಯಕ್ಷೆ ರತ್ನಾ ಪಾಟೀಲ ಹೇಳಿದರು.

ನಗರದ ಪವನ ಶಾಲೆಯ ಸಭಾಂಗಣದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಾಲೆಯ ವಿದ್ಯಾರ್ಥಿಗಳ ಸಾಧನೆಯನ್ನು ಗುರುತಿಸಿ ಅವರಿಗೆ ಶಿಷ್ಯವೇತನ, ಅಗತ್ಯವುಳ್ಳ ಕುಟುಂಬಸ್ಥರಿಗೆ ಸಹಾಯ ಮಾಡಲಾಗುತ್ತಿದೆ. ಮಕ್ಕಳಿಗೆ ಕೇವಲ ವಿದ್ಯಾಭ್ಯಾಸ ಅಲ್ಲದೆ, ಬೌದ್ಧಿಕ ಬೆಳವಣಿಗೆ ಕಲಿಸಲಾಗುತ್ತಿದೆ. ಬ್ಯಾಡ್ಮಿಂಟನ್, ಕ್ರಿಕೆಟ್, ಕರಾಟೆ, ಚಿತ್ರಕಲೆಯಲ್ಲಿ ಸಾಧನೆ ಮಾಡುವವರಿಗೆ ಆದ್ಯತೆ ನೀಡಿ ಅವರಿಗೆ ಪ್ರೋತ್ಸಾಹ ನೀಡಲಾಗುತ್ತಿದೆ ಎಂದರು.

ಎಲ್‌ಕೆಜಿಯಿ0ದ ಎಸ್‌ಎಸ್‌ಎಲ್‌ಸಿವರೆಗಿನ ವಿದ್ಯಾರ್ಥಿಗಳು ವಿಶೇಷ ಸಾಧನೆಗೈದಿದ್ದಾರೆ. ಎಸ್‌ಎಸ್‌ಎಲ್‌ಸಿ ಪರಿಕ್ಷೆಯಲ್ಲಿ ಜಿಲ್ಲೆ ಹಾಗೂ ರಾಜ್ಯ ಮಟ್ಟದಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ. ವಿದ್ಯಾರ್ಥಿಗಳ ಪಠ್ಯ, ಪಠ್ಯೇತರ ಚಟುವಟಿಕೆಗಳಲ್ಲಿ ಸಾಧನೆಯನ್ನು ಗುರುತಿಸಿ ಪ್ರವೇಶಾತಿಯಲ್ಲಿ ವಿನಾಯಿತಿ ನೀಡಲಾಗುವುದು ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net