ಮಾರುಕಟ್ಟೆ ಪ್ರದೇಶದಲ್ಲಿ ಪೇ ಆ್ಯಂಡ್ ಪಾರ್ಕಿಂಗ್ ವ್ಯವಸ್ಥೆ

25 Dwd 6
Published on

ವಿಜಯವಾಣಿ ಸುದ್ದಿಜಾಲ ಧಾರವಾಡ

ನಗರದ ಮಾರುಕಟ್ಟೆ ಪ್ರದೇಶದಲ್ಲಿ ಪೇ ಆ್ಯಂಡ್ ಪಾರ್ಕಿಂಗ್ ವ್ಯವಸ್ಥೆ ಶುಕ್ರವಾರದಿಂದ ಜಾರಿಗೆ ಬಂದಿದೆ. ಮಾರುಕಟ್ಟೆ ರಸ್ತೆಗುಂಟ ಎಲ್ಲೆಂದರಲ್ಲಿ ವಾಹನ ನಿಲುಗಡೆಯಿಂದ ಜನಸಂಚಾರಕ್ಕೆ ತೀವ್ರ ತೊಂದರೆಯಾಗುತ್ತಿತ್ತು. ಸಾರ್ವಜನಿಕರ ಓಡಾಟಕ್ಕೂ ಇದು ಅನಾನುಕೂಲವಾಗುತ್ತಿತ್ತು. ವಾಹನ ನಿಲುಗಡೆಗೆ ಶುಲ್ಕ ವಿಽಸುವಂತೆ ಸಾರ್ವಜನಿಕರ ಒತ್ತಾಯವಾಗಿತ್ತು.

ನಗರದ ಮಾರುಕಟ್ಟೆ ಪ್ರದೇಶದಲ್ಲಿ ಪೇ ಆ್ಯಂಡ್ ಪಾರ್ಕಿಂಗ್ ವ್ಯವಸ್ಥೆ ಜಾರಿ ಕುರಿತು ಪಾಲಿಕೆ ಸಭೆಯಲ್ಲಿ ನಿರ್ಣಯಿಸಲಾಗಿತ್ತು. ಶುಕ್ರವಾರದಿಂದ ಸುಭಾಷ ರಸ್ತೆಯಲ್ಲಿ ಈ ವ್ಯವಸ್ಥೆ ಜಾರಿಗೆ ಬಂದಿದೆ. ಈ ಕುರಿತು ಅಲ್ಲಲ್ಲಿ ಫಲಕಗಳನ್ನು ಅಳವಡಿಸಲಾಗಿದೆ. ಕಾರು ಮತ್ತು ದ್ವಿಚಕ್ರ ವಾಹನಗಳಿಗೆ ದಿನದ ಬೆಳಗ್ಗೆ 7ರಿಂದ ಪ್ರತಿ 2 ಗಂಟೆಗೊಮ್ಮೆ ಪಾಕಿಂಗ್ ದರ ನಿಗದಿಪಡಿಸಲಾಗಿದೆ. ಕನಿಷ್ಠ 5 ರೂಪಾಯಿಯಿಂದ ಗರಿಷ್ಠ 15 ರೂ. ದರ ನಿಗದಿಪಡಿಸಲಾಗಿದೆ.

ಈ ಕುರಿತು ಮಾರುಕಟ್ಟೆ ಪ್ರದೇಶ ವ್ಯಾಪ್ತಿಯ ವಾರ್ಡ್ ನಂ. 15ರ ಸದಸ್ಯ ಶಂಭುಗೌಡ ಸಾಲಮನಿ ಪ್ರತಿಕ್ರಿಯಿಸಿ, ಮಾರುಕಟ್ಟೆಯಲ್ಲಿ ವಾಹನ ದಟ್ಟಣೆ ವಿಪರೀತವಾಗಿತ್ತು. ಎಲ್ಲೆಂದರಲ್ಲಿ ವಾಹನ ನಿಲುಗಡೆ ಮಾಡಲಾಗುತ್ತಿತ್ತು. ಪೇ ಆ್ಯಂಡ್ ಪಾರ್ಕಿಂಗ್ ವ್ಯವಸ್ಥೆ ಜಾರಿಯಿಂದ ಸುಧಾರಣೆಯಾಗುವ ನಿರೀಕ್ಷೆ ಇದೆ. ಅಲ್ಲದೆ, ಇದರಿಂದ ಪಾಲಿಕೆಗೆ ಆದಾಯವೂ ಬಲಿದೆ. ಪೇ ಆ್ಯಂಡ್ ಪಾರ್ಕಿಂಗ್ ವ್ಯವಸ್ಥೆ ಜಾರಿಗೊಳಿಸಿರುವುದು ಸ್ವಾಗತಾರ್ಹ ಕ್ರಮ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net