

ರಾಯಚೂರು: ವಿವಿಧ ಇಲಾಖೆಗಳ ವಸತಿ ನಿಲಯಗಳ್ಲಲಿ ಕಾರ್ಯನಿರ್ವಹಿಸುತ್ತಿರುವ ಹೊರಗುತ್ತಿಗೆ ಕಾರ್ಮಿಕರಿಗೆ ಬಾಕಿಯಿರುವ ವೇತನ ಪಾವತಿಸಬೇಕು ಹಾಗೂ ಶಾಸನಬದ್ಧ ಸೌಲಭ್ಯಗಳನ್ನು ಒದಗಿಸಬೇಕು ಎಂದು ಕರ್ನಾಟಕ ರಾಜ್ಯ ಸಂಯುಕ್ತ ವಸತಿ ನಿಲಯ ಕಾರ್ಮಿಕರ ಸಂಘಟನೆ ಒತ್ತಾಯಿಸಿದೆ.
ಸಂಘದ ನಿಯೋಗ ಜಿ.ಪಂ. ಯೋಜನಾಕಾರಿ ಡಾ.ಟಿ.ರೋಣಿಗೆ ಶುಕ್ರವಾರ ಮನವಿ ಸಲ್ಲಿಸಿ, ಕಳೆದ ಐದಾರು ತಿಂಗಳಿಂದ ವೇತನ ಪಾವತಿಯಾಗದ ಕಾರಣ ಕಾರ್ಮಿಕರು ಜೀವನೋಪಾಯಕ್ಕೆ ಸಮಸ್ಯೆ ಎದುರಿಸುವಂತಾಗಿದ್ದು, ಕೂಡಲೇ ವೇತನ ಪಾವತಿಗೆ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಜಿಲ್ಲೆಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ ಅಡಿಯಲ್ಲಿ ಬರುವ ವಸತಿ ನಿಲಯಗಳಲ್ಲಿ ಅಡುಗೆ, ಅಡುಗೆ ಸಹಾಯಕರು, ರಾತ್ರಿ ಕಾವಲುಗಾರರಾಗಿ ಗುತ್ತಿಗೆಯಡಿ ಹಲವಾರು ಕಾರ್ಮಿಕರು ಕಾರ್ಯನಿರ್ವಹಿಸುತ್ತಿದ್ದಾರೆ.
ಆದರೆ ಅವರಿಗೆ ಶಾಸನಬದ್ಧ ಸೌಲಭ್ಯಗಳನ್ನು ಒದಗಿಸಿಕೊಡುತ್ತಿಲ್ಲ. ವೇತನ ಪಾವತಿ ಸಮಸ್ಯೆಯನ್ನು ನಿವಾರಿಸುತ್ತಿಲ್ಲ. ಜನವರಿ ಅಂತ್ಯದೊಳಗೆ ಸಮಸ್ಯೆ ಇತ್ಯರ್ಥ ಪಡಿಸುವುದಾಗಿ ಭರವಸೆ ನೀಡಲಾಗಿತ್ತು. ಆದರೆ ಐದಾರು ತಿಂಗಳಿಂದ ವೇತನ ಪಾವತಿಯಾಗದೆ ಕಾರ್ಮಿಕರು ಸಮಸ್ಯೆ ಎದುರಿಸುತ್ತಿದ್ದಾರೆ. ೆ.15 ರೊಳಗೆ ವೇತನ ಪಾವತಿಗೆ ಕ್ರಮಕೈಗೊಳ್ಳದಿದ್ದರೆ ಹೋರಾಟ ನಡೆಸಲಾಗುವುದು ಎಂದು ಮನವಿಯಲ್ಲಿ ಎಚ್ಚರಿಸಲಾಗಿದೆ.
ನಿಯೋಗದಲ್ಲಿ ಸಂಘಟನೆ ಅಧ್ಯಕ್ಷ ಮಹೇಶ ಚೀಕಲಪರ್ವಿ, ಪದಾಕಾರಿಗಳಾದ ಹೆಚ್ಚಪ್ಪ, ಅಮರೇಶ, ಹುಸೇನಪ್ಪ, ಹನುಮಂತ, ಜೋಸ್ೆ, ಮಹೇಶ, ಗೋವಿಂದರಾಯ, ನಿತಿನ್‌ಕುಮಾರ, ಶೋಭಾ, ಗೌರಿ, ಎಸ್.ಕುಮಾರ ಇದ್ದರು.