ಗುಂಡಿ ಬಿದ್ದ ರಸ್ತೆಗೆ ಕಾಯಕಲ್ಪ ನೀಡಿ

29blrp1
ಹಲ್ಮಿಡಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯನ್ನು ಅಭಿವೃದ್ಧಿ ಪಡಿಸುವಂತೆ ಆಗ್ರಹಿಸಿ ಜಯ ಕರ್ನಾಟಕ ಸಂಘಟನೆ ಪದಾಧಿಕಾರಿಗಳು ಹೊಸಮನೆಹಳ್ಳಿ ಗ್ರಾಮದ ಕೆರೆ ಏರಿ ಮೇಲೆ ಪ್ರತಿಭಟನೆ ನಡೆಸಿದರು.
Published on

ಬೇಲೂರು: ಕನ್ನಡದ ಪ್ರಥಮ ಶಿಲಾ ಶಾಸನ ದೊರೆತ ಹಲ್ಮಿಡಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಗುಂಡಿ ಬಿದ್ದಿದ್ದು, ಸಂಬಂಧಪಟ್ಟವರು ಇತ್ತ ಗಮನ ಹರಿಸಿ ರಸ್ತೆ ದುರಸ್ತಿಗೆ ಮುಂದಾಗಬೇಕೆಂದು ಆಗ್ರಹಿಸಿ ಜಯ ಕರ್ನಾಟಕ ಸಂಘಟನೆ ತಾಲೂಕು ಘಟಕದ ಪದಾಧಿಕಾರಿಗಳು ತಾಲೂಕಿನ ಹೊಸಮನೆಹಳ್ಳಿ ಗ್ರಾಮದ ಕೆರೆ ಏರಿ ಮೇಲೆ ಭಾನುವಾರ ಪ್ರತಿಭಟಿಸಿದರು.

ಸಂಘಟನೆ ಜಿಲ್ಲಾಧ್ಯಕ್ಷ ಎಂ.ಕೆ.ಆರ್.ಸೋಮೇಶ್ ಮಾತನಾಡಿ, ತಾಲೂಕಿನ ಹಲ್ಮಿಡಿ ಗ್ರಾಮ ಕನ್ನಡಿಗರ ಹೆಮ್ಮೆಯ ತಾಣ. ಗ್ರಾಮಕ್ಕೆ ರಾಜ್ಯದ ವಿವಿಧ ಭಾಗಗಳಿಂದ ಕನ್ನಡಾಭಿಮಾನಿಗಳು ಮತ್ತು ಶೈಕ್ಷಣಿಕ ಪ್ರವಾಸ ಸಂದರ್ಭ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು ಶಿಲಾ ಶಾಸನದ ವೀಕ್ಷಣೆಗೆ ಬರುತ್ತಾರೆ. ಆದರೆ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಗುಂಡಿ ಬಿದ್ದು ವಾಹನಗಳು ಓಡಾಟಕ್ಕೆ ತೊಂದರೆಯಾಗಿದೆ. ರಸ್ತೆ ದುರಸ್ತಿ ಕೆಲಸ ಮಾಡುತ್ತೇವೆ ಎನ್ನುವ ಜನಪ್ರತಿನಿಧಿಗಳು ಇನ್ನೂ ನಿದ್ದೆಯಲ್ಲಿದ್ದಾರೆ. ಶೀಘ್ರ ರಸ್ತೆ ಅಭಿವೃದ್ಧಿ ಪಡಿಸದಿದ್ದಲ್ಲಿ ಸಂಬಂಧಿಸಿದ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು.

ಸಂಘಟನೆ ತಾಲೂಕು ಅಧ್ಯಕ್ಷ ಎಸ್.ಎಂ.ರಾಜು, ಗೌರವಾಧ್ಯಕ್ಷ ಅರುಣ್ ಕುಮಾರ್, ಕಾರ್ಯಾಧ್ಯಕ್ಷ ಲಕ್ಷ್ಮಣ್, ಪ್ರಧಾನ ಕಾರ್ಯ ದರ್ಶಿ ಮಂಜುನಾಥ್, ಉಪಾಧ್ಯಕ್ಷ ಹೊಸಳ್ಳಿ ಗುರುಮೂರ್ತಿ, ಬೆಣ್ಣೂರು ಗ್ರಾಮದ ಮನೋಹರ್, ಮಂಜುನಾಥ್, ಜಗದೀಶ್, ಹೊಸಮನೆಹಳ್ಳಿಯ ಮುಜಮಿಲ್ ಸೇರಿದಂತೆ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net