ತೆರಿಗೆ ಪಾವತಿಸಿ ಅಭಿವೃದ್ಧಿಗೆ ಸಹಕರಿಸಿ

tax
Published on

ಕುಂದಗೋಳ: ಸ್ಥಳೀಯ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಸಾರ್ವಜನಿಕರು ತಮ್ಮ ಆಸ್ತಿಗೆ ಸಂಬಂಧಿಸಿದ ಪ್ರಸಕ್ತ ಸಾಲಿನ ತೆರಿಗೆಯನ್ನು ಏ. 30ರ ಒಳಗೆ ಪಾವತಿಸಿ ಶೇ. 5ರಷ್ಟು ರಿಯಾಯಿತಿಯ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಪಪಂ ಮುಖ್ಯಾಧಿಕಾರಿ ಸಿ.ವಿ. ಕುಲಕರ್ಣಿ ತಿಳಿಸಿದ್ದಾರೆ.

ಮೇ ಮತ್ತು ಜೂನ್ ತಿಂಗಳಲ್ಲಿ ಆಸ್ತಿ ತೆರಿಗೆ ಪಾವತಿಸಿದರೆ ರಿಯಾಯಿತಿ ನೀಡಲಾಗುವುದಿಲ್ಲ. ಶೇ. 2ರಷ್ಟು ದಂಡ ಹೊರತುಪಡಿಸಿ ಆಸ್ತಿ ತೆರಿಗೆ ಪಾವತಿಸಬಹುದು. ಜುಲೈನಿಂದ ಆಸ್ತಿ ತೆರಿಗೆ ಮೇಲೆ ಶೇ. 2ರಷ್ಟು ದಂಡ ವಿಧಿಸಲಾಗುವುದು. ನೀರಿನ ಕರ ಬಾಕಿ ಉಳಿಸಿಕೊಂಡವರು ಹಾಗೂ ಅನಧಿಕೃತ ನಳ ಜೋಡಣೆ ಪಡೆದಿದ್ದಲ್ಲಿ ಸಂಪರ್ಕವನ್ನು ಕಡಿತಗೊಳಿಸಿ ಕಾನೂನು ಕ್ರಮ ಜರುಗಿಸಲಾಗುವುದು.

ಪಟ್ಟಣದಲ್ಲಿರುವ ಆಸ್ತಿ ಮಾಲೀಕರು ನಿಗದಿತ ಅವಧಿಯಲ್ಲಿ ತೆರಿಗೆ ಪಾವತಿಸಿ ರಿಯಾಯಿತಿಯ ಲಾಭ ಪಡೆದುಕೊಂಡು ಪಟ್ಟಣದ ಅಭಿವೃದ್ಧಿಗೆ ಸಹಕರಿಸಬೇಕು ಎಂದು ಪಪಂ ಮುಖ್ಯಾಧಿಕಾರಿ ಸಿ.ವಿ. ಕುಲಕರ್ಣಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net