ಸುರತ್ಕಲ್ 12 ಮಂದಿ ಪೊಲೀಸ್ ವಶಕ್ಕೆ, ಬಿಗು ಬಂದೋಬಸ್ತ್

IMG-20220729-WA0008
Published on

ಮಂಗಳೂರು: ಸುರತ್ಕಲ್ ನಲ್ಲಿ ಗುರುವಾರ ರಾತ್ರಿ ನಡೆದ ಪಾಝಿಲ್ ಹತ್ಯೆ ಪ್ರಕರಣದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಾರಿಗೊಳಿಸಿದ್ದ 144 ಸೆಕ್ಷನ್ ಉಲ್ಲಂಘಿಸಿ ತಿರುಗಾಡುತ್ತಿದ್ದ 12 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಪಾಝಿಲ್ ಮೃತದೇಹವನ್ನು ಸುರತ್ಕಲ್ ದಫನ ಭೂಮಿಗೆ ತರಲಾಗಿದ್ದು, ನೂರಾರು ಸಂಖ್ಯೆಯಲ್ಲಿ ಜನ ಜಮಾಯಿಸಿದ್ದಾರೆ. ಸುರತ್ಕಲ್, ಪಣಂಬೂರು, ಬಜ್ಪೆ ಮೊದಲಾದ ಕಡೆ ಅಂಗಡಿ ಮುಂಗಟ್ಟು ಬಂದ್ ಆಗಿದೆ. ಶಾಲೆ ಕಾಲೇಜುಗಳಿಗೆ ರಜೆ ಸಾರಲಾಗಿದೆ. ಪೊಲೀಸ್ ಬಂದೋಬಸ್ತು ಮಾಡಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net