ನಾಮಪತ್ರ ತಿರಸ್ಕಾರ ಚಕಮಕಿ - ಅಧಿಕಾರಿ ಮೇಲೆ ಗರಂ ಆದ ಶಾಸಕ ಅಶೋಕ್ ರೈ

PTR_12 JAN_4
Published on

ಪುತ್ತೂರು: ಪಿಎಲ್‌ಡಿ ಬ್ಯಾಂಕಿನ ಚುನಾವಣೆಗೆ ಸಲ್ಲಿಸಲಾಗಿದ್ದ ನಾಮಪತ್ರಗಳ ಪೈಕಿ ಕಾಂಗ್ರೆಸ್ ಬೆಂಬಲಿತ ಇಬ್ಬರ ನಾಮಪತ್ರ ತಿರಸ್ಕಾರವಾಗಿದ್ದು, ಶಾಸಕ ಅಶೋಕ್ ಕುಮಾರ್ ರೈ ಗರಂ ಆಗಿ ಬ್ಯಾಂಕಿಗೆ ತೆರಳಿ ಚುನಾವಣಾ ಅಽಕಾರಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಕಾಂಗ್ರೆಸ್ ಬೆಂಬಲಿತ ಸದಸ್ಯರಾದ ರಾಜಶೇಖರ ಜೈನ್ ಮತ್ತು ಅಶೋಕ್ ರೈ ದೇರ್ಲ ಎಂಬುವರ ನಾಮಪತ್ರವನ್ನು ಚುನಾವಣಾ ಅಽಕಾರಿ ಎಆರ್‌ಒ ರಘು ತಿರಸ್ಕೃತಗೊಳಿಸಿದ್ದರು. ಸಕಾರಣವಿಲ್ಲದೆ ಮತ್ತು ಉದ್ದೇಶಪೂರ್ವಕವಾಗಿ ನಾಮಪತ್ರವನ್ನು ತಿರಸ್ಕಾರ ಮಾಡಿರುವ ವಿಚಾರ ಗಮನಕ್ಕೆ ಬರುತ್ತಿದ್ದಂತೆ ಸ್ಥಳಕ್ಕೆ ಶಾಸಕರು ತೆರಳಿದ್ದಾರೆ. ನಾಮಪತ್ರವನ್ನು ಪರಿಶೀಲನೆ ಮಾಡುವ ವೇಳೆ ಅದು ಸರಿಯಾಗಿಯೇ ಇತ್ತು.

ಸ್ಪರ್ಧಿಗಳಾದ ರಾಜಶೇಖರ್ ಜೈನ್ ಮಾತನಾಡಿ ನಮ್ಮ ಇಬ್ಬರ ನಾಮಪತ್ರ ಸರಿಯಾಗಿಯೇ ಇದೆ, ಕಾರಣವಿಲ್ಲದೆ ತಿರಸ್ಕಾರ ಮಾಡಿದ್ದಾರೆ. ಇದಕ್ಕಾಗಿ ನಾವು ಶಾಸಕರಲ್ಲಿ ದೂರು ನೀಡಿರುವುದಾಗಿ ಹೇಳಿದರು. ಲಂಚ ತಗೊಂಡು, ಅನ್ಯಾಯ ಮಾಡಿದ ನಿಮ್ಮನ್ನು ಸಸ್ಪೆಂಡ್ ಮಾಡಿಸ್ತೇನೆ. ನಿಮಗೆ ಬೇಕಾದ ಹಾಗೆ ಕಾನೂನು ಬದಲಾವಣೆ ಮಾಡುವ ಅಽಕಾರ ನಿಮಗಿಲ್ಲ ಎಂದು ಅಽಕಾರಿಗೆ ಶಾಸಕರು ಎಚ್ಚರಿಸಿದರು.

ಅಧಿಕಾರಿ ಹೇಳಿದ್ದೇನು?

ನಾಮಪತ್ರ ಸಲ್ಲಿಸುವ ವೇಳೆ ಸ್ಪರ್ದಿಸುವ ಅಭ್ಯರ್ಥಿ ಯಾವ ಕೆಟಗರಿಯಲ್ಲಿ ಸ್ಪರ್ದೆ ಮಾಡುತ್ತಿದ್ದಾನೆ ಎಂಬ ವಿಚಾರವನ್ನು ನಾಮಪತ್ರದಲ್ಲಿ ನಮೂದಿಸಬೇಕು. ನಮೂದಿಸಿದ ಬಳಿಕ ಉಳಿದ ಕೆಟಗರಿ ಹೆಸರನ್ನು ಅಳಿಸಬೇಕು. ಅಳಿಸದ ಕಾರಣ ನಾಮಪತ್ರ ತಿರಸ್ಕಾರ ಮಾಡಿದ್ದೇನೆ ಎಂದು ಶಾಸಕರಲ್ಲಿ ತಿಳಿಸಿದ್ದಾರೆ. ಆದರೆ ಕಾನೂನು ಪ್ರಕಾರ ಅಭ್ಯರ್ಥಿ ತಾನು ಸ್ಪರ್ಧಿಸುವ ವಿಭಾಗಕ್ಕೆ ರೈಟ್ ಗುರುತು ಹಾಕಬೇಕು ಎಂದು ಇದ್ದು ಉಳಿದ ಕೆಟಗರಿಯನ್ನು ಅಳಿಸಬೇಕೆಂಬ ನಿಯಮವಿರುವುದಿಲ್ಲ ಎಂದು ಹೇಳಲಾಗಿದೆ.

ನಾಮಪತ್ರ ತಿರಸ್ಕಾರ ಮಾಡಲು ಎಷ್ಟು ಲಂಚ ತಗೊಂಡಿದ್ದೀರಿ ಎಂದು ಅಧಿಕಾರಿ ರಘು ಅವರನ್ನು ಪ್ರಶ್ನಿಸಿದ ಶಾಸಕ ಅಶೋಕ್ ರೈ ಪುತ್ತೂರಿನಲ್ಲಿ ಯಾರಿಗೂ ಅನ್ಯಾಯ ಆಗಲು ಬಿಡುವುದಿಲ್ಲ. ಲಂಚ ತಗೊಂಡು ಮೋಸ ಮಾಡಲು ಬಿಡುವುದಿಲ್ಲ ಎಂದು ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net