ಪಿಡಿಒ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

Published on

ಮಂಗಳೂರು: ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಗಳನ್ನು ಭರ್ತಿ ಮಾಡಲು ಬೆಂಗಳೂರಿನ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮುಖಾಂತರ ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಲಾಗಿತ್ತು. ದ.ಕ. ಜಿಲ್ಲೆ ಕಂದಾಯ ಘಟಕದಲ್ಲಿ ಖಾಲಿ ಇರುವ ಹುದ್ದೆಗಳ ಪೈಕಿ 50 ಗ್ರಾಮ ಆಡಳಿತ ಅಧಿಕಾರಿಗಳ ನೇರ ನೇಮಕಾತಿಗೆ ಸಂಬಂಧಿಸಿದಂತೆ ತಾತ್ಕಾಲಿಕ ಅರ್ಹ ಅಭ್ಯರ್ಥಿಗಳ ಆಯ್ಕೆ ಪಟ್ಟಿಯನ್ನು ಮೂಲ ದಾಖಲೆಗಳ ಪರಿಶೀಲನೆಗಾಗಿ ತಾತ್ಕಾಲಿಕ ಪಟ್ಟಿಯನ್ನು ದ.ಕ.ಜಿಲ್ಲಾ ವೆಬ್‌ಸೈಟ್(ಡಿಡಿಡಿ..್ಞಜ್ಚಿ.ಜ್ಞಿ

)ಪ್ರಕಟಿಸಲಾಗಿದೆ. ಆಯ್ಕೆಯಾಗಿರುವ ಅಭ್ಯರ್ಥಿಗಳು ಮೂಲ ದಾಖಲೆ ಪರಿಶೀಲನೆಗೆ ಜ.7ರಂದು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹಾಜರಾಗಬೇಕು. ಹೆಚ್ಚಿನ ಮಾಹಿತಿಗೆ ದ.ಕ.ಜಿಲ್ಲಾಧಿಕಾರಿ ಕಚೇರಿ ದೂರವಾಣಿ- 0824-2220584/2220590ಕ್ಕೆ ಕರೆ ಮಾಡಿ ಆಡಳಿತ ಶಾಖೆಯನ್ನು ಸಂಪರ್ಕಿಸುವಂತೆ ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net