

ಧಾರವಾಡ: ಕಲಘಟಗಿ ತಾಲೂಕಿನ ತಂಬೂರು ಗ್ರಾಮ ಪಂಚಾಯಿತಿ ಹಾಗೂ ಮುಕ್ಕಲ ಗ್ರಾ.ಪಂ.ನ ಹೆಚ್ಚುವರಿ ಪ್ರಭಾರ ಅಭಿವೃದ್ಧಿ ಅಽಕಾರಿ ನಾಗರಾಜಕುಮಾರ ಎಸ್. ಬಿದರಳ್ಳಿ ಅವರನ್ನು ಕರ್ತವ್ಯಲೋಪ ಹಾಗೂ ಹಣಕಾಸು ದುರಪಯೋಗ ಆರೋಪದಡಿ ಜಿಲ್ಲಾ ಪಂಚಾಯಿತಿ ಸಿಇಒ ಭುವನೇಶ ಪಾಟೀಲ ಸೆ. 6ರಂದು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.
ನಾಗರಾಜಕುಮಾರ ಅವರು ತಂಬೂರ ಹಾಗೂ ಮುಕ್ಕಲ ಗ್ರಾಮ ಪಂಚಾಯಿತಿಗಳ ಬ್ಯಾಂಕ್ ಖಾತೆಗಳಿಂದ 10 ಲಕ್ಷಕ್ಕೂ ಹೆಚ್ಚು ಹಣವನ್ನು ಖಾಸಗಿ ವ್ಯಕ್ತಿಗಳಿಗೆ ಸಂದಾಯ ಮಾಡಿದ್ದಾರೆ. ಸರ್ಕಾರದ ನಿಯಮ ಮತ್ತು ಇಲಾಖಾ ಮಾರ್ಗಸೂಚಿಗಳನ್ನು ಉಲ್ಲಂಘಿಸಿ, ಕರ್ತವ್ಯಲೋಪ ಮಾಡಿ ಹಣಕಾಸಿನ ದುರುಪಯೋಗ ಪಡಿಸಿಕೊಂಡಿರುವುದು ಮೇಲ್ನೋಟಕ್ಕೆ ಕಂಡುಬ0ದಿದೆ. ಅವರ ವಿರುದ್ಧ ಇಲಾಖಾ ವಿಚಾರಣೆ ಕಾಯ್ದಿರಿಸಿ ಅಮಾನತುಗೊಳಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.