

ಹಾವೇರಿ: ಕೆಪಿಎಸ್ಸಿ ವತಿಯಿಂದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಹುದ್ದೆಗಳಿಗಾಗಿ ಹಾವೇರಿ ಹಾಗೂ ರಾಣೆಬೆನ್ನೂರ ನಗರದ 28 ಪರೀಕ್ಷಾ ಕೇಂದ್ರಗಳಲ್ಲಿ ಭಾನುವಾರ ಆಯೋಜಿಸಿದ್ದ ಲಿಖಿತ ಪರೀಕ್ಷೆ ಸುಗಮವಾಗಿ ನಡೆಯಿತು.
ಬೆಳಗ್ಗೆ ಏರ್ಪಡಿಸಿದ್ದ ಸಾಮಾನ್ಯ ಜ್ಞಾನ-1 ಪರೀಕ್ಷೆಯಲ್ಲಿ 4,977 ಅಭ್ಯರ್ಥಿಗಳು ಹಾಜರಾಗಿದ್ದರು. 5,549 ಅಭ್ಯರ್ಥಿಗಳು ಗೈರಾಗಿದ್ದರು. ಮಧ್ಯಾಹ್ನ ಸಾಮಾನ್ಯ ಜ್ಞಾನ ಪರೀಕ್ಷೆ- 2ರಲ್ಲಿ 4,844 ಅಭ್ಯರ್ಥಿಗಳು ಹಾಜರಿದ್ದರು. 5,682 ಗೈರಾಗಿದ್ದರು ಎಂದು ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ತಿಳಿಸಿದ್ದಾರೆ.