ಪಿಡಿಒಗಳು ಸಮಸ್ಯೆಗಳಿಗೆ ಸ್ಪಂದಿಸಬೇಕು

3Ckd1
Published on

ಚಿಕ್ಕೋಡಿ: ಗ್ರಾಪಂ ಮಟ್ಟದಲ್ಲಿ ಬರುವ ಹಲವಾರು ಸಮಸ್ಯೆಗಳನ್ನು ಪಿಡಿಒಗಳು ಪರಿಹರಿಸಬೇಕು ಎಂದು ಪಂಚಾಯತ್ ರಾಜ್ಯ ಇಲಾಖೆ ಅಧಿಕಾರಿ ರಘುನಾಥ ರಾಜಾಪೂರೆ ಹೇಳಿದರು.

ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಈಚೆಗೆ ಹಮ್ಮಿಕೊಂಡಿದ್ದ ಪಂಚಾಯಿತಿ ರಾಜ್ಯ ಇಲಾಖೆ ಅಧಿಕಾರಿಗಳ ನಿವೃತ್ತಿ ಸನ್ಮಾನ ಸ್ವೀಕರಿಸಿ ಮಾತನಾಡಿ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಒತ್ತಡದಲ್ಲಿ ಕೆಲಸ ನಿರ್ವಹಿಸಬಾರದು. ಗ್ರಾಮ ಪಂಚಾಯಿತಿ ಸಿಬ್ಬಂದಿಗಳು ನಮ್ಮವರೆಂದು ತಿಳಿದುಕೊಂಡು ಕೆಲಸ ಮಾಡಬೇಕು. ಸಮಸ್ಯೆಗಳಿಗೆ ಹೆದರದೆ ಧೈರ್ಯವಾಗಿ ಕಾರ್ಯ ನಿರ್ವಹಿಸಬೇಕು ಎಂದು ಸಲಹೆ ನೀಡಿದರು.

ಕಾರ್ಯನಿರ್ವಾಹಕ ಅಧಿಕಾರಿ ಕೆ.ಎನ್.ವಣ್ಣೂರ ಮಾತನಾಡಿದರು. ನಿವೃತ್ತರಾದ ರಘುನಾಥ ರಾಜಾಪುರೆ ಮತ್ತು ಕಾರ್ಯದರ್ಶಿ ವಿಠ್ಠಲ ಕುರಣೆ ಅವರನ್ನು ಸನ್ಮಾನಿಸಲಾಯಿತು.

ಸಹಾಯಕ ನಿರ್ದೇಶಕ ಎಸ್.ಎಸ್.ಮಠದ, ಶಿವಾನಂದ ಶಿರಗಾಂವೆ, ವ್ಯವಸ್ಥಾಪಕ ಉದಯಗೌಡ ಪಾಟೀಲ, ಸಹಾಯಕ ಲೆಕ್ಕಾಧಿಕಾರಿ ರಾಜೇಂದ್ರ ಮೈಗೂರ, ತಾಲೂಕು ಯೋಜನಾಧಿಕಾರಿ ರೇಖಾ ಮೇತ್ರಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net