

ಮಂಗಳೂರು: ಮುಸ್ಲಿಂ ಬಾಂಧವರ ಬಕ್ರೀದ್ ಹಬ್ಬವನ್ನು ಶಾಂತಿಯುತವಾಗಿ ಆಚರಿಸುವುದಾಗಿ ಧಾರ್ಮಿಕ ಮುಖಂಡರು ಭರವಸೆ ನೀಡಿದ್ದಾರೆ.
ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಮಂಗಳವಾರ ಜಿಲ್ಲಾಡಳಿತ ಹಾಗೂ ಜಿಲ್ಲಾ ಪೊಲೀಸ್ ವತಿಯಿಂದ ನಡೆದ ಸಭೆಯಲ್ಲಿ ನಗರದ ವಿವಿಧ ಕಡೆಗಳಿಂದ ಎಲ್ಲಾ ಧರ್ಮಗಳ ಮುಖಂಡರ ಉಪಸ್ಥಿತಿಯಲ್ಲಿ ನಡೆದ ಶಾಂತಿ ಸಭೆಯಲ್ಲಿ ಸಲಹೆ, ಸೂಚನೆ ನೀಡಿದರು.
ನಗರದಲ್ಲಿ ಎಲ್ಲೆಂದರಲ್ಲಿ ವಾಹನಗಳನ್ನು ಪಾರ್ಕ್ ಮಾಡುವುದರಿಂದ ವಾಹನ ದಟ್ಟಣೆ ಉಂಟಾಗುತ್ತಿದೆ. ಇದರ ನಿಯಂತ್ರಣ ಮತ್ತು ನಗರದಲ್ಲಿ ವ್ಯಾಪಕವಾಗಿ ಬೇರೂರುತ್ತಿರುವ ಡ್ರಗ್ಸ್ ದಂಧೆಗೆ ಕಡಿವಾಣ ಹಾಕಲು ಪೂರ್ಣ ಸಹಕಾರ ನೀಡುವುದಾಗಿ ಮುಖಂಡರು ಭರವಸೆ ನೀಡಿದರು.
ಮಂಗಳೂರು ನಗರದ ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಆರ್ ಜೈನ್, ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್ ಸಿ.ಬಿ., ಡಿಸಿಪಿಗಳಾದ ಅಂಶು ಕುಮಾರ್, ಬಿ.ಪಿ ದಿನೇಶ್ ಕುಮಾರ್ ಮೊದಲಾದವರು ಉಪಸ್ಥಿತರಿದ್ದರು.