ಶೇಂಗಾ-ಸೂರ್ಯಕಾಂತಿ ಖರೀದಿ

ಬಳ್ಳಾರಿ ಡಿಸಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಕೆ.ನಾಗೇಂದ್ರ ಪ್ರಸಾದ್ ಅಧ್ಯಕ್ಷತೆಯಲ್ಲಿ ಜಿಲ್ಲಾ ಟಾಸ್ಕ್ಫೋರ್ಸ್ ಸಭೆ ನಡೆಯಿತು. ಕೃಷಿ ಮಾರಾಟ ಇಲಾಖೆ ಉಪನಿರ್ದೇಶಕ ಓಂಕಾರಯ್ಯ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಸೋಮಸುಂದರ್, ಸಹಕಾರ ಇಲಾಖೆ ಉಪನಿಬಂಧಕ ವೀರಭದ್ರಯ್ಯ, ಕಾನೂನು ಮಾಪನಶಾಸ್ತ್ರ ಇಲಾಖೆ ನಿರೀಕ್ಷಕ ಮನೋಜ್ ಕುಮಾರ್, ಜಿಲ್ಲಾ ವ್ಯವಸ್ಥಾಪಕ ಅಯ್ಯಪ್ಪ ಇದ್ದರು.

Published on

ಬಳ್ಳಾರಿ: ಜಿಲ್ಲೆಯಲ್ಲಿ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಎಫ್.ಎ.ಕ್ಯೂ ಗುಣಮಟ್ಟದ ಮುಂಗಾರು ಹಂಗಾಮಿನ ಸೂರ್ಯಕಾಂತಿ ಮತ್ತು ಶೇಂಗಾ ಖರೀದಿಸಲಾಗುವುದು ಎಂದು ಡಿಸಿ ಕೆ.ನಾಗೇಂದ್ರ ಪ್ರಸಾದ್ ಹೇಳಿದರು.

ನಗರದ ಡಿಸಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಟಾಸ್ಕ್ಫೋರ್ಸ್ ಸಭೆಯಲ್ಲಿ ಮಾತನಾಡಿದರು. ಜಿಲ್ಲೆಯಲ್ಲಿ ಮೂಲಸೌಕರ್ಯದೊಂದಿಗೆ ಖರೀದಿ ಕೇಂದ್ರಗಳ ಆರಂಭಕ್ಕೆ ಅಗತ್ಯ ಸಿದ್ಧತೆ ಕೈಗೊಳ್ಳಬೇಕು. ಫ್ರೂಟ್ಸ್ ಐಡಿಯೊಂದಿಗೆ ಹತ್ತಿರದ ಖರೀದಿ ಕೇಂದ್ರಗಳಲ್ಲಿ ನೋಂದಣಿ ಮಾಡಿಸುವ ಕುರಿತು ರೈತರಿಗೆ ಅಗತ್ಯ ಮಾಹಿತಿ ನೀಡಬೇಕು. ಆಧಾರ್ ಸಂಖ್ಯೆ ಜೋಡಣೆಯಾದ ರೈತರ ಬ್ಯಾಂಕ್ ಖಾತೆಗೆ ಡಿಬಿಟಿ ಮೂಲಕ ಹಣ ಜಮೆ ಆಗಲಿದೆ. ಇದರಿಂದಾಗಿ ಕಡ್ಡಾಯವಾಗಿ ಎಫ್‌ಐಡಿ ಮತ್ತು ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆ ಮಾಡಿಕೊಳ್ಳುವಂತೆ ರೈತರಿಗೆ ತಿಳಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಧಾನ್ಯಗಳ ಖರೀದಿಗಾಗಿ ಎಪಿಎಂಸಿ ಮಾರುಕಟ್ಟೆ ಇದ್ದು, ಬೇಡಿಕೆ ಇದ್ದಲ್ಲಿ ರೈತರ ಅನುಕೂಲಕ್ಕಾಗಿ ಸಂಡೂರಿನ ಎಪಿಎಂಸಿಯಲ್ಲಿ ಖರೀದಿ ಕೇಂದ್ರ ಆರಂಭಿಸಲು ಸಿದ್ಧತೆ ಕೈಗೊಳ್ಳಬೇಕು ಎಂದು ಎಣ್ಣೆ ಬೀಜ ಬೆಳೆಗಾರರ ಸಹಕಾರ ಸಂಘದ ಅಧಿಕಾರಿಗಳಿಗೆ ಡಿಸಿ ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net